ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುತ್ತೂರು | ಗ್ರಾಮ ಪಂಚಾಯತ್‌ ಉಪಚುನಾವಣೆ; 11 ನಾಮಪತ್ರ ಕ್ರಮಬದ್ಧ

Published 13 ಜುಲೈ 2023, 14:21 IST
Last Updated 13 ಜುಲೈ 2023, 14:21 IST
ಅಕ್ಷರ ಗಾತ್ರ

ಪುತ್ತೂರು: ತಾಲ್ಲೂಕಿನ ಆರ್ಯಾಪು, ನಿಡ್ಪಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ತೆರವಾಗಿದ್ದ ತಲಾ ಒಂದು ಸ್ಥಾನಗಳಿಗೆ ಜುಲೈ 23ರಂದು ನಡೆಯಲಿರುವ ಉಪಚುನಾವಣೆಗೆ ಸಂಬಂಧಿಸಿ ಸಲ್ಲಿಕೆಯಾಗಿದ್ದ 11 ನಾಮಪತ್ರಗಳೂ ಕ್ರಮಬದ್ಧವಾಗಿವೆ.

ಆರ್ಯಾಪು ಎರಡನೇ ವಾರ್ಡ್‌ನ ಹಿಂದುಳಿದ ವರ್ಗ ‘ಎ’ಗೆ ಮೀಸಲಾಗಿರುವ ಸ್ಥಾನಕ್ಕೆ 5 ನಾಮಪತ್ರಗಳು ಮತ್ತು ನಿಡ್ಪಳ್ಳಿ ಗ್ರಾಮ ಪಂಚಾಯಿತಿಯ ನಿಡ್ಪಳ್ಳಿ ಒಂದನೇ ವಾರ್ಡ್‌ನ ಸಾಮಾನ್ಯ ವರ್ಗಕ್ಕೆ ಮೀಸಲಾಗಿರುವ ಸ್ಥಾನಕ್ಕೆ 6 ನಾಮಪತ್ರಗಳು ಸಲ್ಲಿಕೆಯಾಗಿದ್ದು, ನಾಮಪತ್ರಗಳ ಪರಿಶೀಲನೆ ಗುರುವಾರ ನಡೆಯಿತು.

ಆರ್ಯಾಪು ಉಪ ಚುನಾವಣೆಯ ಚುನಾವಣಾಧಿಕಾರಿ, ಸಹಕಾರ ಸಂಘಗಳ ಸಹಾಯಕ ನಿಬಂಧಕಿ ತ್ರಿವೇಣಿ ರಾವ್, ಉಪ ಚುನಾವಣಾಧಿಕಾರಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಗೇಶ್ ಎಂ.ನಾಮಪತ್ರ ಪರಿಶೀಲಿಸಿದರು.

ನಿಡ್ಪಳ್ಳಿ ಗ್ರಾಮ ಪಂಚಾಯಿತಿಯ ಉಪ ಚುನಾವಣೆಗೆ ಸಂಬಂಧಿಸಿ ಚುನಾವಣಾಧಿಕಾರಿ, ತಾಲ್ಲೂಕು ಪಂಚಾಯಿತಿ ಯೋಜನಾಧಿಕಾರಿ ಸುಕನ್ಯಾ, ಉಪಚುನಾವಣಾಧಿಕಾರಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂಧ್ಯಾಲಕ್ಷ್ಮಿ ಅವರು ನಾಮಪತ್ರಗಳನ್ನು ಪರಿಶೀಲಿಸಿದರು.

ನಾಮಪತ್ರ ವಾಪಸ್‌ಗೆ ಜುಲೈ15 ಕೊನೆಯ ದಿನವಾಗಿದ್ದು, ಜುಲೈ 23ರಂದು ಬೆಳಿಗ್ಗೆ 7ರಿಂದ ಸಂಜೆ 5ರ ವರೆಗೆ ಮತದಾನ ನಡೆಯಲಿದ್ದು, ಅಗತ್ಯವಿದ್ದರೆ ಜುಲೈ 25ರಂದು ಮರು ಮತದಾನ ನಡೆಯಲಿದೆ. ಜುಲೈ 26ರಂದು ಮತ ಎಣಿಕೆ ನಡೆಲಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT