ಬುಧವಾರ, ಮೇ 18, 2022
25 °C

ದಕ್ಷಿಣ ಕನ್ನಡ: ಕೇಳುಗರ ಸಂಘ; ಕವಿಗೋಷ್ಠಿ ನ.13ಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ರೇಡಿಯೊ ಕೇಳುಗರ ಸಂಘದ 45ನೇ ಕಾರ್ಯಕ್ರಮವಾದ ಕನ್ನಡ ರಾಜ್ಯೋತ್ಸವ ಸಂಭ್ರಮ ಮತ್ತು ಕವಿಗೋಷ್ಠಿಯನ್ನು ನ.13ರಂದು ಸಂಜೆ 4ಗಂಟೆಗೆ ನಗರದ ಕೆನರಾ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಯು.ರಾಮರಾವ್ ತಿಳಿಸಿದರು.

ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಕೆನರಾ ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಬಿ.ಯೋಗೀಶ್ ಆಚಾರ್ಯ ಕಾರ್ಯಕ್ರಮ ಉದ್ಘಾಟಿಸುವರು. ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಅಧ್ಯಕ್ಷ ಡಾ.ಸುರೇಶ್ ನೆಗಳಗುಳಿ ‘ಆಯುರ್ವೇದ ಮತ್ತು ಆರೋಗ್ಯ’ ಕುರಿತು ಉಪನ್ಯಾಸ ನೀಡುವರು. ಲೆಕ್ಕ ಪರಿಶೋಧಕ ಎಸ್.ಎಸ್.ನಾಯಕ್ ಅಧ್ಯಕ್ಷತೆ ವಹಿಸುವರು. ಬರ್ಕೆ ಠಾಣೆ ಇನ್‌ಸ್ಪೆಕ್ಟರ್ ಜ್ಯೋತಿರ್ಲಿಂಗ ಚಂದ್ರಾಮ ಹೊನಕಟ್ಟಿ, ಸಾಹಿತ್ಯ ವೇದಿಕೆಯ ಸಂಘಟನಾ ಕಾರ್ಯದರ್ಶಿ ಸಮುದ್ರವಳ್ಳಿ ವಾಸು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದರು.

ಸುದ್ದಿಗೋಷ್ಠಿಯಲ್ಲಿ ರೇಡಿಯೊ ಕೇಳುಗರ ಸಂಘದ ಕಾರ್ಯದರ್ಶಿ ಸಾವಿತ್ರಿ ಆರ್.ರಾವ್, ಕೋಶಾಧಿಕಾರಿ ಪಿ.ರವೀಂದ್ರ ರಾವ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.