ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಹುಲ್‌ ಗಾಂಧಿ ನಿಂದನೆ: ಶಾಸಕ ಭರತ್ ಶೆಟ್ಟಿ ವಿರುದ್ಧ ದೂರು

Published 9 ಜುಲೈ 2024, 12:48 IST
Last Updated 9 ಜುಲೈ 2024, 12:48 IST
ಅಕ್ಷರ ಗಾತ್ರ

ಮೂಲ್ಕಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರನ್ನು ನಿಂದಿಸಿದ ಶಾಸಕ ಭರತ್ ಶೆಟ್ಟಿ ವಿರುದ್ಧ ಯೂಥ್‌ ಕಾಂಗ್ರೆಸ್‌ನ ಮೂಲ್ಕಿ ಘಟಕದಿಂದ ಇಲ್ಲಿನ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಸೋಮವಾರ ಕಾವೂರಿನಲ್ಲಿ ಬಿಜೆಪಿ ಯುವ ಮೋರ್ಚಾದ ದಕ್ಷಿಣ ಕನ್ನಡ ಜಿಲ್ಲಾ ಘಟಕ ನಡೆಸಿದ ಪ್ರತಿಭಟನೆಯಲ್ಲಿ ‘ರಾಹುಲ್ ಗಾಂಧಿಯ‌ ಕೆನ್ನೆಗೆ ಬಾರಿಸಿದರೆ ಒಳ್ಳೆಯದಿತ್ತು’ ಎಂದು ಶಾಸಕ ಭರತ್‌ ಶೆಟ್ಟಿ ಹೇಳಿದ್ದರು. ಹಿಂದೂ ಧರ್ಮವನ್ನು ರಾಹುಲ್ ಗಾಂಧಿಯ ವಿರುದ್ಧ ಎತ್ತಿ ಕಟ್ಟುವ ಪ್ರಯತ್ನ ನಡೆಸಿದ  ಶಾಸಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್‌ ಆಗ್ರಹಿಸಿದೆ. ಯೂಥ್‌ ಕಾಂಗ್ರೆಸ್‌, ಬ್ಲಾಕ್‌ ಕಾಂಗ್ರೆಸ್‌ ಪ್ರಮುಖರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT