ಭಾನುವಾರ, ಏಪ್ರಿಲ್ 11, 2021
27 °C

ಜಿಲ್ಲೆಯ ವಿವಿಧೆಡೆ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸುಳ್ಯ: ಇಲ್ಲಿನ ತಾಲ್ಲೂಕಿನ ವಿವಿಧೆಡೆ ಸಾಧಾರಣ ಮಳೆ ಸುರಿದಿದೆ. ಭಾನುವಾರ ಸಂಜೆ ವೇಳೆ ಮಳೆ ಸುರಿದಿದ್ದು, ಸುಳ್ಯ ಪಟ್ಟಣದಲ್ಲಿ ಹೆಚ್ಚು ಮಳೆ ಸುರಿದಿದೆ.

ಬೆಳ್ತಂಗಡಿ ವರದಿ: ತಾಲ್ಲೂಕಿನಲ್ಲಿ ಭಾನುವಾರ ಸಂಜೆ ವೇಳೆ ಸಾಧರಣ ಮಳೆಯಾಗಿದೆ. ಸುಮಾರು ಅರ್ಧ ಗಂಟೆಯ ಕಾಲ ಮಳೆ ಸುರಿದಿದೆ. ತಾಲ್ಲೂಕಿನ ಬೆಳ್ತಂಗಡಿ, ಅಳದಂಗಡಿ, ನಾರಾವಿ, ವೇಣೂರು, ಮಡಂತ್ಯಾರು ಪ್ರದೇಶಗಳಲ್ಲಿ ಸಾಧಾರಣ ಮಳೆ ಸುರಿದಿದೆ.

ರಾತ್ರಿ ವೇಳೆಯೂ ಮೋಡ ಕವಿದ ವಾತಾವರಣವಿದ್ದು, ಮಳೆ ಸುರಿಯುವ ಸಾಧ್ಯತೆ ಹೆಚ್ಚು.

ವಿಟ್ಲ ವರದಿ: ಇಲ್ಲಿನ ಪರಿಸರದಲ್ಲಿ ತುಂತುರು ಮಳೆಯಾಗಿದ್ದು, ಮಾಣಿ ಭಾಗದಲ್ಲಿ ಭಾರಿ ಮಳೆ ಸುರಿದಿದೆ.

ವಿಟ್ಲದ ಕನ್ಯಾನ, ವಿಟ್ಲ ಪೇಟೆಯಲ್ಲಿ ಮೋಡ ಕವಿದ ವಾತಾವರಣ ಕಂಡು ಬಂದಿದ್ದು, ಮಾಣಿ ಭಾಗದಲ್ಲಿ ಮಾತ್ರ ಹೆಚ್ಚು ಮಳೆಯಾಗಿದೆ. ವಿಟ್ಲದ ಅನಂತಾಡಿ, ಕೊಡಾಜೆ ಭಾಗದಲ್ಲಿ ತುಂತುರು ಮಳೆಯಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು