ಮಳೆ: ಕಿನ್ಯಾ ಶಾಲಾ ಕಟ್ಟಡ ಕುಸಿತ

ಉಳ್ಳಾಲ: ಸೋಮವಾರ ರಾತ್ರಿ ಸುರಿದ ಭಾರೀ ಮಳೆಗೆ ಶಿಥಿಲಾವಸ್ಥೆಯಲ್ಲಿದ್ದ ಶಾಲೆ ಕಟ್ಟಡ ಕುಸಿದುಬಿದ್ದಿದೆ. ಕಿನ್ಯಾ ಬೆಳರಿಂಗೆ ಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹಳೇ ಕಟ್ಟಡ ಕುಸಿದುಬಿದ್ದಿದೆ. ಸಮೀಪದಲ್ಲೇ ಹೊಸ ಕಟ್ಟಡ ನಿರ್ಮಿಸಲಾಗಿದ್ದು, ಅದರಲ್ಲಿ ತರಗತಿಗಳು ನಡೆಯುತ್ತಿದ್ದುದರಿಂದ ತರಗತಿ ನಡೆಸಲು ಅಡಚಣೆಯಾಗಿಲ್ಲ.
ಹಳೇ ಕಟ್ಟಡ ಕೆಡವಲು ಗ್ರಾಮ ಪಂಚಾಯಿತಿಯಿಂದ ಶಿಕ್ಷಣ ಇಲಾಖೆಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ, ಅನುಮತಿ ನೀಡದ್ದರಿಂದ ಕಟ್ಟಡ ಕೆಡವಲು ಸಾಧ್ಯವಾಗಿಲ್ಲ ಎಂದು ಗ್ರಾ.ಪಂ. ಸದಸ್ಯ ಸಿರಾಜ್ ಕಿನ್ಯಾ ತಿಳಿಸಿದ್ದಾರೆ.
ಮೋಡ ಕವಿದ ವಾತಾವರಣ:
ದಕ್ಷಿಣಕನ್ನಡ ಜಿಲ್ಲೆಯ ಹಲವೆಡೆ ಮಂಗಳವಾರವೂ ಮಳೆ ಮುಂದುವರಿದಿದೆ. ಬೆಳಿಗ್ಗೆಯಿಂದ ತುಂತುರು ಮಳೆಯಾಗುತ್ತಿದೆ. ಮಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಂಜೆ ಮಳೆ ಶುರುವಾಗುವ ಸಾಧ್ಯತೆ ಇದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.