ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಲಿಕಲ್ಲು ಮಳೆ

Last Updated 29 ಏಪ್ರಿಲ್ 2021, 16:33 IST
ಅಕ್ಷರ ಗಾತ್ರ

ಮಂಗಳೂರು: ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಗುರುವಾರ ಉತ್ತಮ ಮಳೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ, ಸುಳ್ಯ ತಾಲ್ಲೂಕಿನ ಗುಡುಗು ಸಹಿತ ಆಲಿಕಲ್ಲು ಮಳೆಯಾಗಿದೆ. ಕುಕ್ಕೆ ಸುಬ್ರಹ್ಮಣ್ಯ, ಬಿಳಿನೆಲೆ, ನೂಜಿಬಾಳ್ತಿಲ, ರೆಂಜಿಲಾಡಿ, ಇಚ್ಲಂಪಾಡಿ, ಕಡ್ಯ ಕೊಣಾಜೆ, ಬಳ್ಪ, ಯೇನೆಕಲ್ಲು, ಐನೆಕಿದು, ಸುಳ್ಯ ತಾಲೂಕಿನ ಪಂಜ, ಕೊಲ್ಲಮೊಗ್ರು, ಹರಿಹರ ಪಲ್ಲತಡ್ಕ, ಕಲ್ಮಕಾರು ವ್ಯಾಪ್ತಿಯಲ್ಲಿ ಮಳೆಯಾಗಿದೆ.

ಸಂಪಾಜೆ ಭಾಗದಲ್ಲಿಯೂ ಧಾರಾಕಾರ ಮಳೆಯಾಗಿದೆ. ಕಲ್ಲಾಜೆ, ಕಲ್ಮಡ್ಕ, ಪಂಜ, ಈಶ್ವರಮಂಗಲ, ಕೊಯಿಲ, ಉಜಿರೆ, ಪಂಜಿಕಲ್ಲು ಪೆರಾಜೆ ಸೇರಿ ಹಲವೆಡೆ ಮಳೆಯಾಗಿದೆ. ಬೆಳ್ತಂಗಡಿ, ಬಂಟ್ವಾಳ ತಾಲ್ಲೂಕಿನ ವಿವಿಧೆಡೆ ಮಳೆಯಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ, ಕಳಸ, ಕೊಪ್ಪದಲ್ಲಿ ಗುಡುಗು, ಸಿಡಿಲಿನೊಂದಿಗೆ ಧಾರಾಕಾರ ಮಳೆಯಾಗಿದೆ. ಬಾಳೆಹೊನ್ನೂರಿನಲ್ಲಿ ಸಾಧಾರಣ ಮಳೆ ಸುರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT