ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರಾವಳಿಯಲ್ಲಿ ಐದು ದಿನ ಮಳೆ ಸಾಧ್ಯತೆ

Last Updated 9 ಸೆಪ್ಟೆಂಬರ್ 2020, 2:25 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸೆ.9ರಿಂದ 13ರವರೆಗೆ ಗುಡುಗು, ಸಿಡಿಲು ಸಹಿತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸೆ.10 ಮತ್ತು 11ರಂದು 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ. ರಾಜ್ಯದ ಕರಾವಳಿಯಲ್ಲಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ.

ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಕೋಲಾರ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, 'ಯೆಲ್ಲೊ ಅಲರ್ಟ್' ಘೋಷಿಸಿದೆ. ಉಳಿದ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹೆಚ್ಚಾಗಿ ಇರಲಿದೆ.

ಮಳೆ-ಎಲ್ಲಿ, ಎಷ್ಟು?: ಚಿಂತಾಮಣಿಯಲ್ಲಿ 9 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಅಂಕೋಲಾ 6, ಪಾವಗಡ 5, ಸಿಂಧನೂರು, ರಾಮದುರ್ಗ, ಶ್ರವಣಬೆಳಗೊಳ, ಶಿಡ್ಲಘಟ್ಟ, ಕಂಪ್ಲಿ 2, ಕಲಬುರ್ಗಿ, ಹಿರಿಯೂರು, ಗುಬ್ಬಿ, ಕೋಲಾರ, ಕೊಳ್ಳೇಗಾಲ, ಹೊಸಪೇಟೆ, ಚಿಕ್ಕಮಗಳೂರು ಹಾಗೂ ಕೊಪ್ಪದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT