ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಲ್ಲಡ್ಕ: ಪ್ರಥಮ ಮಳೆಗೆ ರಸ್ತೆ ಅಯೋಮಯ

Published 23 ಮೇ 2024, 13:30 IST
Last Updated 23 ಮೇ 2024, 13:30 IST
ಅಕ್ಷರ ಗಾತ್ರ

ಬಂಟ್ವಾಳ: ಮೂರು ದಿನಗಳಿಂದ ಸುರಿಯುತ್ತಿರುವ ಸಾಧಾರಣ ಮಳೆಗೆ ಇಲ್ಲಿನ ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ಬಳಿ ಸರ್ವಿಸ್‌ ರಸ್ತೆ ಸಂಪೂರ್ಣ ಕೆಸರುಮಯಗೊಂಡು ವಾಹನ ಸಂಚಾರಕ್ಕೆ ತೊಂದರೆ ಆಗುತ್ತಿದೆ.

ಬಿ.ಸಿ.ರೋಡು- ಅಡ್ಡಹೊಳೆ ಚತುಪ್ಪಥ ರಸ್ತೆ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದ್ದು, ಇಲ್ಲಿನ ರಸ್ತೆ ಬದಿ ಸೂಕ್ತ ಚರಂಡಿ ಇಲ್ಲದೆ ರಸ್ತೆಯಲ್ಲೇ ಮಳೆ ನೀರು ಹರಿಯುತ್ತಿದೆ ಎಂದು ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷವೂ ಭಾರಿ ವಾಹನಗಳು ಕೆಸರಿನಲ್ಲಿ ಸಿಲುಕಿ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿತ್ತು. ಈ ಬಾರಿ ದ್ವಿಚಕ್ರ ವಾಹನ ಸವಾರರು ಜಾರಿ ಬೀಳುವ ಸ್ಥಿತಿ ಉಂಟಾಗಿದ್ದು, ಜನಪ್ರತಿನಿಧಿಗಳು ಸೇರಿದಂತೆ ಹೆದ್ದಾರಿ ಇಲಾಖೆ, ಗುತ್ತಿಗೆ ಸಂಸ್ಥೆ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ವಾರ ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ್ ನೇತೃತ್ವದಲ್ಲಿ ತಹಶೀಲ್ದಾರ್ ಅರ್ಚನಾ ಡಿ.ಭಟ್ ಮತ್ತು ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳು ಕಾಮಗಾರಿ ಪರಿಶೀಲನೆ ನಡೆಸಿದ್ದರು. ಗುತ್ತಿಗೆ ಸಂಸ್ಥೆ ಎಂಜಿನಿಯರ್‌ ಜತೆ ಮಾತುಕತೆ ನಡೆಸಿ, ಮಳೆ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡುವಂತೆ ಸೂಚಿಸಿದ್ದರು. ಆದರೆ, ಗುತ್ತಿಗೆ ಸಂಸ್ಥೆ ಸ್ಪಂದಿಸಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT