ಗುರುವಾರ , ಮೇ 28, 2020
27 °C

ಚಿತ್ರ ಸಂಪುಟ | ಮಂಗಳೂರಿನಲ್ಲಿ ಶುರುವಾಗಿದೆ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ನಗರದಲ್ಲಿ ಸೋಮವಾರ ಮುಂಜಾನೆ ಗುಡುಗು ಸಿಡಿಲು ಗಾಳಿ ಸಹಿತ ಮಳೆ ಸುರಿಯಿತು. ಬೆಳಿಗ್ಗೆ 5.40 ಸುಮಾರಿಗೆ ಆರಂಭಗೊಂಡ ಮಳೆ 8.30ರ ತನಕವೂ ಸುರಿಯುತ್ತಿತ್ತು. ಬಿಸಿಲಿನ ಝಳದಿಂದ ಬಸವಳಿದ ಜನರಿಗೆ ತಂಪು ನೀಡಿತು.

ನಗರದ ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಜನರಿಗೆ ತೊಂದರೆಯಾಯಿತು. ಮೋಡಗಳು ದಟ್ಟೈಸಿದ್ದ ಕಾರಣ ಬೆಳಕು ಮಬ್ಬಾಗಿತ್ತು. ವಾಹನಗಳು ಹೆಡ್‌ಲೈಟ್ ಹಾಕಿಕೊಂಡೇ ಸಂಚರಿಸಿದವು. ಜಿಲ್ಲೆಯಲ್ಲಿ ಭಾರಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ಯುವನೊಬ್ಬ ಸಿಡಿಲು ಬಡಿದು ಮೃತಪಟ್ಟಿದ್ದಾನೆ. ಮೃತನನ್ನು ಭರತ್ ಎಂದು ಗುರುತಿಸಲಾಗಿದೆ. ತಕ್ಷಣ ಯುವಕನನ್ನು ಆಸ್ಪತ್ರೆಗೆ ಕರೆತರಲಾಯಿತಾದರೂ ಆತ ಚಿಕಿತ್ಸೆಗೆ ಸ್ಪಂದಿಸಲಿಲ್ಲ.

 

ಪ್ರಜಾವಾಣಿಯ ಛಾಯಾಗ್ರಹಕ ಗೋವಿಂದರಾಜ ಜವಳಿ ಮಂಗಳೂರು ಮಳೆಯನ್ನು ಕ್ಯಾಮೆರಾ ಕಣ್ಣಿನಲ್ಲಿ ಸೆರೆ ಹಿಡಿದಿದ್ದಾರೆ.

 

 

 

 

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.