ಸೋಮವಾರ, ಜುಲೈ 4, 2022
22 °C

ಬಾರ್‌ ಕೌನ್ಸಿಲ್‌ ಸದಸ್ಯತ್ವದಿಂದ ರಾಜೇಶ್‌ ಅಮಾನತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ತರಬೇತಿಗೆ ಬಂದಿದ್ದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ವಕೀಲ ಕೆ.ಎಸ್.ಎನ್. ರಾಜೇಶ್‌ನನ್ನು ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್, ಸದಸ್ಯತ್ವದಿಂದ ಅಮಾನತುಗೊಳಿಸಿದೆ. ಬಾರ್ ಕೌನ್ಸಿಲ್ ಅಧ್ಯಕ್ಷ ಶ್ರೀನಿವಾಸ ಬಾಬು ನೇತೃತ್ವದ ಸಮಿತಿ ಈ ಕ್ರಮ ಕೈಗೊಂಡಿದೆ.

ಮಂಗಳೂರಿನ ಪಾಂಡೇಶ್ವರದ ಮಹಿಳಾ ಠಾಣೆಯಲ್ಲಿ ರಾಜೇಶ್ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿದ್ದು, ತನಿಖೆ ನಡೆದಿದೆ. ವಕೀಲರ ಕಾಯ್ದೆಯ 35ನೇ ಸೆಕ್ಷನ್ ಅಡಿಯಲ್ಲಿ ಮುಂದಿನ ಆದೇಶದವರೆಗೆ ಈ ಅಮಾನತು ಜಾರಿಯಲ್ಲಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಬಾರ್ ಕೌನ್ಸಿಲ್‌ನಿಂದ ರಾಜೇಶ್ ಅಮಾನತುಗೊಂಡಿದ್ದರಿಂದ ಮುಂದಿನ ದಿನಗಳಲ್ಲಿ ನ್ಯಾಯಾಲಯದಲ್ಲಿ ವಕಾಲತು ವಹಿಸುವ ಹಕ್ಕನ್ನು ಕಳೆದುಕೊಂಡಿದ್ದಾರೆ ಎಂದು ಹಿರಿಯ ವಕೀಲರೊಬ್ಬರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು