ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಕ್ಷಿತ್ ಶಿವರಾಂ ಮಾವ ಶೇಖರ್‌ ಹೇರಾಜೆ ರಸ್ತೆ ಅಪಘಾತದಲ್ಲಿ ಸಾವು

Published 28 ಮಾರ್ಚ್ 2024, 17:48 IST
Last Updated 28 ಮಾರ್ಚ್ 2024, 17:48 IST
ಅಕ್ಷರ ಗಾತ್ರ

ಬೆಳ್ತಂಗಡಿ (ದಕ್ಷಿಣ ಕನ್ನಡ): ಇಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಗುರುವಾರ ರಾತ್ರಿ ಸ್ಕೂಟರ್ ಡಿಕ್ಕಿ ಹೊಡೆದಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಗಾಯಳು ಮೃತಪಟ್ಟರು.

ಶೇಖರ್ ಬಂಗೇರ ಹೇರಾಜೆ (65)ಮೃತರು. ಅವರು ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ರಕ್ಷಿತ್ ಶಿವರಾಂ ಅವರ ಸೋದರ ಮಾವ.

ಪಟ್ಟಣದ ಸಂತೆಕಟ್ಟೆ ಬಸ್ ನಿಲ್ದಾಣದ ಮುಂಭಾಗದ ಹೋಟೆಲ್‌ನಿಂದ ಪಾರ್ಸಲ್ ಖರೀದಿಸಿದ್ದ ಅವರು, ರಸ್ತೆ ದಾಟುವಾಗ ಸ್ಕೂಟರ್‌ ಡಿಕ್ಕಿ ಹೊಡೆದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಕೊನೆಯುಸಿರೆಳೆದರು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಶೇಖರ್ ಬಂಗೇರ ಹೇರಾಜೆ ವಿಜಯ ಬ್ಯಾಂಕಿನ ನಿವೃತ್ತ ಉದ್ಯೋಗಿ. ಮುಗ್ಗ ಗುತ್ತು ಮನೆತನ ಟ್ರಸ್ಟ್‌ನ ಖಜಾಂಚಿ. ಲಾಯಿಲ ರಾಘವೇಂದ್ರ ಮಠದ ಆಡಳಿತ ಮಂಡಳಿಯ ಖಜಾಂಚಿ. ‌ಬೆಳ್ತಂಗಡಿ ಶ್ರೀಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಾಜಿ ಉಪಾಧ್ಯಕ್ಷ.

ಸ್ಕೂಟರ್‌ನಲ್ಲಿದ್ದ ಬೆಳ್ತಂಗಡಿಯ ಗೇರುಕಟ್ಟೆ ನಿವಾಸಿ ಅನುಷಾ (19) ಗಂಭೀರ ಗಾಯಗೊಂಡಿದ್ದು, ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT