ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ರಾಮನವಮಿ ಉತ್ಸವ

Published 18 ಏಪ್ರಿಲ್ 2024, 15:07 IST
Last Updated 18 ಏಪ್ರಿಲ್ 2024, 15:07 IST
ಅಕ್ಷರ ಗಾತ್ರ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ರಾಮ ನವಮಿ ಉತ್ಸವದ ಅಂಗವಾಗಿ ಸುಬ್ರಹ್ಮಣ್ಯ ದೇವರಿಗೆ ಪಾಲಕಿ ಉತ್ಸವ ನೆರವೇರಿತು.

ದೇವಳದಿಂದ ಕಾಶಿಕಟ್ಟೆ ಮಹಾ ಗಣಪತಿ ಸನ್ನಿಧಾನದವರೆಗೆ ದೇವರ ಉತ್ಸವ ನಡೆಯಿತು.

ಬಂಡಿವಾಳ ಕಟ್ಟೆಯಲ್ಲಿ ದೇವರಿಗೆ ಪೂಜೆ ನೆರವೇರಿತು. ದೇವಳದ ಅರ್ಚಕ ಸತ್ಯನಾರಾಯಣ ನೂರಿತ್ತಾಯ ಅವರು ಉತ್ಸವದ ವಿಧಿವಿಧಾನ ನೆರವೇರಿಸಿದರು.

ಕಟ್ಟೆಪೂಜೆ ಬಳಿಕ ಪ್ರಸಾದ ವಿತರಿಸಲಾಯಿತು. ರಾಮ ನವಮಿ ಪ್ರಯುಕ್ತ ದೇವಳದ ಹೊರಾಂಗಣದ ಆಂಜನೇಯ ಸನ್ನಿಧಾನದಲ್ಲಿ ವಿಶೇಷ ಪೂಜೆ ನೆರವೇರಿತು. ದೇವಳದ ಕಾರ್ಯನಿರ್ವಹಣಾಧಿಕಾರಿ ನಿಂಗಯ್ಯ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT