ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಪ್ರಚಾರಕ್ಕೆ ಉತ್ತರ ನೀಡಲು ಸಿದ್ಧ: ಮಾಜಿ ಸಚಿವ ಬಿ.ರಮಾನಾಥ ರೈ

Last Updated 19 ನವೆಂಬರ್ 2021, 1:55 IST
ಅಕ್ಷರ ಗಾತ್ರ

ಬಂಟ್ವಾಳ: ‘ಬಿಜೆಪಿಯವರ ಸುಳ್ಳು ಆರೋಪ ಮತ್ತು ಅಪಪ್ರಚಾರ ಎದುರಿಸಲು ಕಾಂಗ್ರೆಸ್ ಸಿದ್ಧವಿದೆ. ಬಿಜೆಪಿ ನೇತೃತ್ವದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಆಡಳಿತ ವೈಫಲ್ಯ ಜನತೆಗೆ ತಿಳಿಸುವ ಜವಾಬ್ದಾರಿ ಪಕ್ಷದ ಕಾರ್ಯಕರ್ತರ ಮೇಲಿದೆ’ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.

ಪಂಜಿಕಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಂಗ್ರೆಸ್ ಬೂತ್ ಅಧ್ಯಕ್ಷರ ಮನೆಗೆ ಮಾಜಿ ಸಚಿವ ಬಿ.ರಮಾನಾಥ ರೈ ಬುಧವಾರ ಭೇಟಿ ನೀಡಿ, ತೆಂಗಿನ ಸಸಿ ವಿತರಿಸಿ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಮಾತನಾಡಿದರು. ವಲಯ ಅಧ್ಯಕ್ಷ ದೇವಪ್ಪ ಕುಲಾಲ್, ಬೂತ್ ಸಮಿತಿ ಅಧ್ಯಕ್ಷರಾದ ಕೃಷ್ಣಪ್ಪ ಕುಲಾಲ್, ರವಿ ಪೂಜಾರಿ, ರೋಬಿನ್, ಜಿಲ್ಲಾ ಸಹಕಾರಿ ಸಂಘದ ಅಧ್ಯಕ್ಷ ಸುದರ್ಶನ್ ಜೈನ್, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಕುಕ್ಕಿಪಾಡಿ ತಿಮ್ಮಪ್ಪ ಪೂಜಾರಿ, ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಸುರೇಶ್ ಪೂಜಾರಿ ಜೋರಾ, ಪ್ರಮುಖರಾದ ಪದ್ಮಾವತಿ ವಿ. ಪೂಜಾರಿ, ಮಾಲತಿ ಪೂಜಾರಿ, ಜಗದೀಶ್ ಕೊಯಿಲ, ವಿಶ್ವನಾಥ ಶೆಟ್ಟಿ, ದೇಜಪ್ಪ ಪೂಜಾರಿ, ದಿನೇಶ್ ಶೆಟ್ಟಿ, ಮೆಲ್ವಿನ್ ಲೋಬೊ, ಕೇಶವ ಪೂಜಾರಿ, ವಾಲ್ಟರ್ ನೋರೊನ್ಹ, ವಸಂತಿ, ಪ್ರಕಾಶ್ ಕುಮಾರ್ ಜೈನ್ ಪೀರ್ದಬೆಟ್ಟು, ನೋಣಯ್ಯ, ನೇಮಿರಾಜ್ ಕಡಂಬ, ಐತಪ್ಪ ಆಳ್ವ, ಮೋಹನ್ ಪೂಜಾರಿ, ಪ್ರವೀಣ್, ಚೇತನ್ ಬುಡೋಳಿ, ಕೊನ್ಸೆಪ್ಟ್ ಡೇಸಾ, ರಾಜೇಶ್ ಶೆಟ್ಟಿ ಬುಡೋಳಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT