ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೊಂಡಾಲ ಪ್ರಶಸ್ತಿಗೆ ರಮೇಶ್ ಭಟ್ ಆಯ್ಕೆ

Last Updated 4 ಫೆಬ್ರುವರಿ 2021, 11:34 IST
ಅಕ್ಷರ ಗಾತ್ರ

ಮಂಗಳೂರು: ಯಕ್ಷಗಾನ ಅರ್ಥಧಾರಿಯಾಗಿದ್ದ ದಿವಂಗತ ಬೊಂಡಾಲ ಜನಾರ್ದನ ಶೆಟ್ಟಿ ಮತ್ತು ಅವರ ಪುತ್ರ ದಿವಂಗತ ಬೊಂಡಾಲ ರಾಮಣ್ಣ ಶೆಟ್ಟರ ಹೆಸರಿನಲ್ಲಿ ಬೊಂಡಾಲ ಚಾರಿಟಬಲ್ ಟ್ರಸ್ಟ್ ನೀಡುವ ‘ಬೊಂಡಾಲ ಪ್ರಶಸ್ತಿ’ಗೆ ಕಟೀಲು ಮೇಳದ ವೇಷಧಾರಿ ರಮೇಶ ಭಟ್ ಬಾಯಾರು ಆಯ್ಕೆಯಾಗಿದ್ದಾರೆ.

ಯಕ್ಷಗಾನ ಅಕಾಡೆಮಿಯ ಮಾಜಿ ಸದಸ್ಯ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಸಂಚಾಲಕರಾಗಿರುವ ಆಯ್ಕೆ ಸಮಿತಿಯು ಈ ವಾರ್ಷಿಕ ಪ್ರಶಸ್ತಿಗೆ ರಮೇಶ ಭಟ್ ಅವರನ್ನು ಆಯ್ಕೆ ಮಾಡಿದೆ. 1985ರಿಂದ ಇಲ್ಲಿಯವರೆಗೆ ಸುಮಾರು 35 ವರ್ಷಗಳಿಂದ ಅವರು ಕಟೀಲು ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯಲ್ಲಿ ಪಾತ್ರ ಮಾಡುತ್ತಿದ್ದಾರೆ. ‘ದೇವಿ ಮಹಾತ್ಮೆ’ ಪ್ರಸಂಗದ ಶ್ರೀದೇವಿ ಪಾತ್ರಕ್ಕೆ ಅವರು ಪ್ರಸಿದ್ಧರು. ರಮೇಶ್ ಭಟ್ಟರ ಸೀತೆ, ದಮಯಂತಿ, ಕಯಾದು, ಮೋಹಿನಿ, ದ್ರೌಪದಿ, ಮೀನಾಕ್ಷಿ, ಶಶಿಪ್ರಭೆ, ಯಶೋಮತಿ ಮೊದಲಾದ ಸ್ತ್ರೀ ಭೂಮಿಕೆಗಳು ಜನಪ್ರಿಯವಾಗಿವೆ.

ಇದೇ 18ರ ರಾತ್ರಿ ಬಂಟ್ವಾಳ ತಾಲ್ಲೂಕು ಶಂಭೂರು ಗ್ರಾಮದ ಬೊಂಡಾಲದಲ್ಲಿ ಕಟೀಲು ಮೇಳದಿಂದ ‘ಸಮಗ್ರ ರಾವಣ’ ಹಾಗೂ ಮರುದಿನ ಬೊಂಡಾಲ ಚಾರಿಟಬಲ್ ಟ್ರಸ್ಟ್ ವತಿಯಿಂದ ‘ದೇವಿ ಮಹಾತ್ಮೆ’ ಸೇವೆ ಬಯಲಾಟಗಳು ನಡೆಯಲಿವೆ. ಮರುದಿನ 19ರಂದು ನಡೆಯುವ ಬೊಂಡಾಲ ಜನಾರ್ದನ ಶೆಟ್ಟಿ ಮತ್ತು ರಾಮಣ್ಣ ಶೆಟ್ಟಿ ಸಂಸ್ಮರಣಾ ಕಾರ್ಯಕ್ರಮದಲ್ಲಿ ಬೊಂಡಾಲ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಟ್ರಸ್ಟ್ ಅಧ್ಯಕ್ಷರಾಗಿರುವ, ಉದ್ಯಮಿ ಬೊಂಡಾಲ ಸಚ್ಚಿದಾನಂದ ಶೆಟ್ಟಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT