ಸುರತ್ಕಲ್: ರಂಗಚಾವಡಿ ಮಂಗಳೂರು ಆಶ್ರಯದಲ್ಲಿ ಸುರತ್ಕಲ್ನ ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ ಸಹಯೋಗದಲ್ಲಿ ರಂಗಚಾವಡಿ ವರ್ಷದ ಹಬ್ಬ, ರಂಗಚಾವಡಿ ಪ್ರಶಸ್ತಿ 2023 ಪ್ರದಾನ ಸಮಾರಂಭ ಡಿ.3ರಂದು ಸಂಜೆ 4.30ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ.

2023ರ ಸಾಲಿನ ರಂಗಚಾವಡಿ ಪ್ರಶಸ್ತಿಯನ್ನು ನಾಟಕ ರಚನೆಕಾರ, ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ಬೈಲ್ ಸ್ವೀಕರಿಸಲಿದ್ದಾರೆ.

ಮುಂಬೈ ಹೇರಂಬ ಇಂಡಸ್ಟ್ರೀಸ್ ಆಡಳಿತ ನಿರ್ದೇಶಕ ಕನ್ಯಾನ ಸದಾಶಿವ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ವಹಿಸಲಿದ್ದಾರೆ.

ಚಲನಚಿತ್ರ ನಿರ್ಮಾಪಕ ಸಂಜೀವ ದಂಡೆಕೇರಿ, ಕಟೀಲುಶ್ರೀ ಡೆವಲಪರ್ಸ್ ಸಂಸ್ಥೆಯ ಮಾಲೀಕ ಗಿರೀಶ್ ಎಂ.ಶೆಟ್ಟಿ ಕಟೀಲು, ತೆರಿಗೆ ಹಣಕಾಸು ನಿರ್ಧರಣೆ ಮತ್ತು ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷ ವರುಣ್ ಚೌಟ, ಬಂಟರ ಮಾತೃ ಸಂಘದ ತಾಲ್ಲೂಕು ಸಮಿತಿ ಸಂಚಾಲಕ ವಸಂತ ಶೆಟ್ಟಿ, ಮುಂಬೈ ಥಾಣೆ ಬಂಟ್ಸ್ ಅಸೋಸಿಯೇಷನ್ ಮಾಜಿ ಅಧ್ಯಕ್ಷ ವೇಣುಗೋಪಾಲ ಶೆಟ್ಟಿ, ಚಲನ ಚಿತ್ರ ನಿರ್ಮಾಪಕ ಚಂದ್ರಶೇಖರ ಮಾಡ ಕುದ್ರಾಡಿಗುತ್ತು, ಯಕ್ಷಧ್ರುವ ಪಟ್ಲ ಫೌಂಡೇಷನ್ ಸುರತ್ಕಲ್ ಘಟಕದ ಅಧ್ಯಕ್ಷ ಸುಧಾಕರ ಎಸ್.ಪೂಂಜ, ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ರಮೇಶ್ ಶೆಟ್ಟಿ, ಚಲನಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್, ಮಂಗಳೂರು ಯಥಾರ್ಥ್ ಸೋಶಿಯಲ್ ಸ್ಥಾಪಕ ಈಶ್ವರ್ ಪ್ರಸಾದ್ ಶೆಟ್ಟಿ ಭಾಗವಹಿಸಲಿದ್ದಾರೆ.

ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ಘಟಕದ ಕೇಂದ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೆ.ಭಂಡಾರಿ ಅಭಿನಂದನಾ ಭಾಷಣ ಮಾಡಲಿದ್ದಾರೆ.

ಸಂಜೀವ ದಂಡೆಕೇರಿ, ವಿ.ಜಿ.ಪಾಲ್, ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಅವರನ್ನೊಳಗೊಂಡ ಆಯ್ಕೆ ಸಮಿತಿ ವಿಜಯಕುಮಾರ್ ಕೊಡಿಯಾಲ್ ಬೈಲ್ ಅವರನ್ನು ಆಯ್ಕೆ ಮಾಡಿದೆ.

ಕಲಾಸಂಗಮ ಮಂಗಳೂರು ತಂಡದಿಂದ ವಿಜಯಕುಮಾರ್ ಕೊಡಿಯಾಲ್ ಬೈಲ್ ರಚಿಸಿ ನಿರ್ದೇಶಿಸಿರುವ ಮೈತಿದಿ ನಾಟಕ ಪ್ರದರ್ಶನ ಕಾಣಲಿದೆ ಎಂದು ರಂಗಚಾವಡಿ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.