ಬೆಳ್ತಂಗಡಿ : ಅತ್ಯಾಚಾರ ಅಪರಾಧಿಗೆ 20 ವರ್ಷ ಜೈಲು, ₹ 50 ಸಾವಿರ ದಂಡ

ಮಂಗಳೂರು: ಬೆಳ್ತಂಗಡಿ ತಾಲ್ಲೂಕಿನ ಗ್ರಾಮವೊಂದರಲ್ಲಿ ಬಾಲಕಿ ಮೇಲೆ ಲೈಂಗಿಕ ಅಪರಾಧ ನಡೆಸಿದ ಬಾಬಿ (48) ಎಂಬಾತನಿಗೆ ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ತ್ವರಿತಗತಿ ನ್ಯಾಯಾಲಯ -2 (ಪೊಕ್ಸೊ) 20 ವರ್ಷ ಕಾರಾಗೃಹ ವಾಸ ಹಾಗೂ ₹ 50 ಸಾವಿರ ದಂಡ ವಿಧಿಸಿದೆ.
ಅಪರಾಧಿಯು ದಂಡ ಕಟ್ಟಲು ತಪ್ಪಿದಲ್ಲಿ ಮತ್ತೆ 6 ತಿಂಗಳ ಕಠಿಣ ಕಾರಾಗೃಹವಾಸ ಅನುಭವಿಸಬೇಕು ಎಂದು ನ್ಯಾಯಾಧೀಶ ರಾಧಾಕೃಷ್ಣ ಆದೇಶ ಮಾಡಿದ್ದಾರೆ.
ಬಾಬಿಯು 2021ರ ಡಿ 19ರಿಂದ 2022ರ ಫೆ 26ರ ನಡುವೆ ಮದ್ಯ ಕುಡಿದ ಮತ್ತಿನಲ್ಲಿ ಬಾಲಕಿ ಮೇಲೆ ಪದೇ ಪದೇ ಲೈಂಗಿಕ ಅಪರಾಧ ಎಸಗಿದ್ದ. ನೊಂದ ಬಾಲಕಿರು 2022ರ ಮಾರ್ಚ್ 3ರಂದು ಬೆಳ್ತಂಗಡಿ ಠಾಣೆಗೆ ಈ ಬಗ್ಗೆ ದೂರು ನೀಡಿದ್ದಳು. ಠಾಣೆಯ ಪಿಎಸ್‌ಐ ನಂದಕುಮಾರ್ ಅವರು ಲೈಂಗಿಕ ಅಪರಾಧದಿಂದ ಮಕ್ಕಳ ರಕ್ಷಣೆ ಪೊಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದರು. ಪ್ರಕರಣದ ತನಿಖೆ ನಡೆಸಿದ್ದ ವೃತ್ತ ನಿರೀಕ್ಷಕ ಶಿವಕುಮಾರ ಬಿ. ಅವರು ಬಾಬಿ ವಿರುದ್ಧ ಸಾಕ್ಷಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಹೆಡ್ ಕಾನ್ಸ್ಟೆಬಲ್ ವಿಜಯಕುಮಾರ್ ತನಿಖಾ ಸಹಾಯಕರಾಗಿದ್ದರು. ಸರ್ಕಾರದ ಪರವಾಗಿ ವಕೀಲ ವೆಂಕಟರಮಣ ಸ್ವಾಮಿ ವಾದ ಮಂಡಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.