ಮಂಗಳೂರು:ಗೆಳೆಯನ ಜೊತೆ ವಿಹಾರಕ್ಕೆ ಬಂದಿದ್ದ ಯುವತಿ ಮೇಲೆ ಸುರತ್ಕಲ್‌ನ ಎನ್ಐಟಿಕೆ ಸಮೀಪದ ಕಡಲ ಕಿನಾರೆಯಲ್ಲಿ ಯುವಕನೊಬ್ಬ ಅತ್ಯಾಚಾರ ನಡೆಸಿದ್ದಾಗಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜುಲೈ 27ರ ಮಧ್ಯಾಹ್ನ ಕೃತ್ಯ ನಡೆದಿದೆ. ಯುವತಿಯ ದೂರು ಆಧರಿಸಿ ಪೊಲೀಸರು ಆರೋಪಿಮುನಾಝ್ ಅಹಮದ್ (30)ನನ್ನು ಬಂಧಿಸಿ, ಕೋರ್ಟ್‌ಗೆ ಹಾಜರುಪಡಿಸಿದ್ದಾರೆ. ಆರೋಪಿ ಲಾರಿಯ ಚಾಲಕನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಯುವತಿ ಮೇಲೆ ಎಸಗಿದ ಲೈಂಗಿಕ ದೌರ್ಜನ್ಯದ ವಿಡಿಯೊವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದ ಆರೋಪಿ, ಅದೇ ದಿನ ಸಂಜೆ ಕರೆ ಮಾಡಿ ಕಿರುಕುಳ ನೀಡಿದ್ದ. ನಗ್ನವಾಗಿ ವಿಡಿಯೊ ಕರೆ ಮಾಡಬೇಕು. ಇಲ್ಲ
ದಿದ್ದರೆ, ವಿಡಿಯೊ
ವನ್ನು ಜಾಲತಾಣಗಳಲ್ಲಿ ಹಂಚಿಕೊಳ್ಳುವುದಾಗಿ ಬೆದರಿಕೆ ಒಡ್ಡಿದ್ದ’ ಎಂದು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಹೇಳಿದರು.

'ಆರೋಪಿಯು ಹೀಗೇ ಬೇರೆ ಯುವತಿಯರಿಗೂ ಕಿರುಕುಳ ನೀಡಿರುವ ಸಾಧ್ಯತೆ ಇದೆ. ಹೆಚ್ಚಿನ ವಿಚಾರಣೆ ನಡೆದಿದ್ದು ಆತನಿಂದ ಮೊಬೈಲ್‌ಗಳನ್ನೂ ವಶಕ್ಕೆ ಪಡೆದಿದ್ದೇವೆ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.