ಮೂಲ್ಕಿ: ಇಲ್ಲಿನ ಮೂಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಬಾಲಕಿಯನ್ನು ಯುವಕ ಅಪಹರಿಸಿ ಲೈಂಗಿಕ ದೌರ್ಜನ್ಯ ನಡೆಸಿದ ಸಂಬಂಧ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಯನ್ನು ಬಜಪೆಯ ಸ್ವಾಮಿಲಪದವು ನಿವಾಸಿ ಪ್ರೀತಂ (20) ಎಂದು ಗುರುತಿಸಲಾಗಿದೆ.

ಆರೋಪಿಯು ಮಾರ್ಚ್ 25ರಂದು ಬಾಲಕಿಯನ್ನು ಕರೆದುಕೊಂಡು ಹೋಗಿದ್ದು, ಈ ಬಗ್ಗೆ ಬಾಲಕಿಯ ತಾಯಿ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಆರೋಪಿಯು ಬಾಲಕಿಯನ್ನು ಹಾಸನದ ಉದಯಪುರಕ್ಕೆ ಕರೆದುಕೊಂಡು ಹೋಗಿ ಅಲ್ಲಿ ವಾಸವಾಗಿದ್ದ. ಕೆಲವು ದಿನಗಳ ಹಿಂದೆ ಯುವಕ ಮರಳಿ ಮಂಗಳೂರಿಗೆ ಬಂದಿರುವ ಮಾಹಿತಿ ಆಧರಿಸಿ ಮೂಲ್ಕಿ ಪೊಲೀಸರು ಆರೋಪಿ ಸಹಿತ ಬಾಲಕಿಯನ್ನು ಠಾಣೆಗೆ ಕರೆಸಿ ಮಾಹಿತಿ ಪಡೆದುಕೊಂಡಿದ್ದರು.

ಆರೋಪಿಯು ಬಾಲಕಿಯೊಂದಿಗೆ ದೈಹಿಕ ಸಂಪರ್ಕ ನಡೆಸಿದ್ದು, ಆತನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ ಎಂದು ಮೂಲ್ಕಿ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.