ಗುರುವಾರ , ಮೇ 6, 2021
22 °C

ತನಿಖೆ ನಂತರ ಶ್ರೀಲತಾ ವಿರುದ್ಧ ಕ್ರಮ: ಎನ್. ಶಶಿಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಹಾಸನ ಜಿಲ್ಲೆಯ ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಹೊಂಗರವಳ್ಳಿಯ ಏ.10ರಂದು ರಾತ್ರಿ ನಡೆದ ರೇವ್‌ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ನಗರ ಎಕನಾಮಿಕ್ ಆಂಡ್ ನಾರ್ಕೊಟಿಕ್ ಕ್ರೈಂ ಠಾಣೆಯ ಹೆಡ್‌ ಕಾನ್‌ಸ್ಟೆಬಲ್ ಶ್ರೀಲತಾ ಅವರನ್ನು ಅಮಾನತು ಮಾಡಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್‌ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಶ್ರೀಲತಾ ತಮ್ಮನ್ನು ಸಿಸಿಬಿ ಅಧಿಕಾರಿ ಎಂದು ಅಲ್ಲಿ ಪರಿಚಯಿಸಿಕೊಂಡಿರುವ ಬಗ್ಗೆ ಮಾಹಿತಿ ಇದೆ. ಹುದ್ದೆಯನ್ನು ದುರುಪಯೋಗ ಮಾಡಿಕೊಂಡಿರುವ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದರು.

ಘಟನೆಯಲ್ಲಿ ಶ್ರೀಲತಾರ ಪಾತ್ರದ ಬಗ್ಗೆ ಹಿರಿಯ ಅಧಿಕಾರಿಯಿಂದ ಸಮಗ್ರ ತನಿಖೆ ನಡೆಸಲಾಗುವುದು. ಬಳಿಕ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಆಯುಕ್ತ ಶಶಿಕುಮಾರ್ ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು