ಪುತ್ತೂರು: ಜೀವನದ ಆಳವಾದ ಅರ್ಥ, ಉದ್ದೇಶ ಮತ್ತು ನಿರ್ದಿಷ್ಟಗುರಿಯನ್ನು ಸಾಧು-ಸಂತರು, ಶಾಸ್ತ್ರಗಳು ಹಾಗೂ ಪ್ರಾಚೀನ ಗ್ರಂಥವಾದ ಭಗವದ್ಗೀತೆ ತಿಳಿಸಿಕೊಟ್ಟಿದೆ ಎಂದು ಮಂಗಳೂರಿನ ಇಸ್ಕಾನ್ ಅಧ್ಯಕ್ಷ ಗುಣಾಕರ ರಾಮದಾಸ ಹೇಳಿದರು.
ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವಿವೇಕ ವಿಧಾತ ಭಗವದ್ಗೀತಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪುತ್ತೂರು ನಗರ ಪೊಲೀಸ್ ಠಾಣೆಯ ಎಸ್ಐ ಆಂಜನೇಯ ರೆಡ್ಡಿ ಮಾತನಾಡಿದರು.
ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ರವೀಂದ್ರ ಪಿ. ಅಧ್ಯಕ್ಷತೆ ವಹಿಸಿದ್ದರು.
ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್, ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮಹೇಶ್ ನಿಟಿಲಾಪುರ ಭಾಗವಹಿಸಿದ್ದರು. ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಹಾಗೂ ಉಪನ್ಯಾಸಕರಿಗೆ 1,600 ಭಗವದ್ಗೀತೆ ಕೃತಿಯನ್ನು ವಿತರಿಸಲಾಯಿತು.
ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ ಸದಸ್ಯ ಡಾ.ಕೃಷ್ಣ ಪ್ರಸನ್ನ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕಿ ದಿವ್ಯಾ ಕೆ.ಸ್ವಾಗತಿಸಿ, ನಿರೂಪಿಸಿದರು. ಕಾಲೇಜಿನ ಉಪಪ್ರಾಂಶುಪಾಲ ದೇವಿಚರಣ್ ರೈ ವಂದಿಸಿದರು.