ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಫ್ಐ ಹತ್ತಿಕ್ಕಲು ಬದ್ಧ: ಸಚಿವ ಸುನಿಲ್‌ ಕುಮಾರ್‌

Last Updated 27 ಸೆಪ್ಟೆಂಬರ್ 2022, 11:29 IST
ಅಕ್ಷರ ಗಾತ್ರ

ಬಂಟ್ವಾಳ: ಹಿಂಸೆಯಿಂದ ಸಾಮಾಜಿಕ ವ್ಯವಸ್ಥೆ ಬುಡಮೇಲು ಗೊಳಿಸಲು ಯತ್ನಿಸುತ್ತಿರುವ ಪಿಎಫ್ಐ ಸಂಘಟನೆ ಹತ್ತಿಕ್ಕಲು ದಕ್ಷ ಕಾರ್ಯಾಚರಣೆ ನಡೆಸುತ್ತಿರುವ ಪೊಲೀಸ್ ಇಲಾಖೆಯ ಕಾರ್ಯವೈಖರಿ ಶ್ಲಾಘನೀಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ‌.ಸುನಿಲ್ ಕುಮಾರ್ ಹೇಳಿದರು.

ಇಲ್ಲಿನ ಬಿ.ಸಿ.ರೋಡ್‌ನಲ್ಲಿ ಮಂಗಳವಾರ ನಡೆದ ಬಿಜೆಪಿ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಸಮಾಜ ಘಾತುಕ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ‌ ಇಲ್ಲದವರ ವಿರುದ್ಧ ಕೇಂದ್ರ ಮತ್ತು ರಾಜ್ಯ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ‌ಕೈಗೊಳ್ಳುತ್ತಿವೆ. ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ನಡೆದಿದ್ದ ಹಿಂದೂ ಕಾರ್ಯಕರ್ತರ ಹತ್ಯೆ ಮತ್ತು ಸಮಾಜ ದ್ರೋಹಿಗಳಿಗೆ ವಿಜೃಂಭಿಸಲು ಬಿಜೆಪಿ ಸರ್ಕಾರ ಅವಕಾಶ ನೀಡುವುದಿಲ್ಲ ಎಂದರು.

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಇಂತಹ ಸಮಾಜಘಾತುಕ ಶಕ್ತಿಗಳು ವಿಜೃಂಭಿಸಲು ಅವಕಾಶ ಕೊಟ್ಟಿದ್ದರು ಎಂದು ದೂರಿದರು.

ಸಮಾವೇಶ: ಬಿಜೆಪಿ ಹಿಂದುಳಿದ ವರ್ಗಗಳ ಸಮಾವೇಶ ಮತ್ತು ಪ್ರಿಯದರ್ಶಿನಿ ಫಲಾನುಭವಿಗಳ ಸಮಾವೇಶವನ್ನು ಸಚಿವರು ಉದ್ಘಾಟಿಸಿದರು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಘಟಕದ ಅಧ್ಯಕ್ಷ ನೆ.ಲ. ನರೇಂದ್ರ ಬಾಬು, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ. ಪದ್ಮನಾಭ ಕೊಟ್ಟಾರಿ, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಕೆ. ಹರಿಕೃಷ್ಣ ಬಂಟ್ವಾಳ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಜಿಲ್ಲಾ ಕಾರ್ಯದರ್ಶಿ ರಾಮದಾಸ ಬಂಟ್ವಾಳ, ಆರ್.ಸಿ. ನಾರಾಯಣ್ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT