ಬುಧವಾರ, ಸೆಪ್ಟೆಂಬರ್ 29, 2021
19 °C

ವಾರಾಂತ್ಯ ಕರ್ಫ್ಯೂ ಮರು ಪರಿಶೀಲನೆಗೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ವಿಧಿಸಿರುವ ಕ್ರಮವನ್ನು ಮರುಪರಿಶೀಲಿಸಬೇಕು ಎಂದು ಶಾಸಕ ಯು.ಟಿ. ಖಾದರ್ ಒತ್ತಾಯಿಸಿದರು.

ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಾರಾಂತ್ಯ ಕರ್ಫ್ಯೂ ವೇಳೆ ಕೆಲವು ಅಂಗಡಿಗಳಿಗೆ ಮಧ್ಯಾಹ್ನ 2 ಗಂಟೆಯವರೆಗೆ ತೆರೆಯಲು ಅವಕಾಶ ನೀಡಲಾಗಿದೆ. ಬಟ್ಟೆ ಅಂಗಡಿ, ಪಾದರಕ್ಷೆ ಮೊದಲಾದ ವ್ಯಾಪಾರಕ್ಕೆ ಅವಕಾಶ ಇಲ್ಲ. ವಾರಾಂತ್ಯ ಕರ್ಫ್ಯೂ ವಿಧಿಸುವುದರ ಹಿಂದಿನ ತರ್ಕ ಯಾವುದೆಂದು ತಿಳಿಯುತ್ತಿಲ್ಲ. ಇದರಿಂದ ಕೋವಿಡ್ ತಡೆಗೆ ಯಾವುದೇ ಪ್ರಯೋಜನ ಆಗುತ್ತಿಲ್ಲ. ವಾರಾಂತ್ಯ ಕರ್ಫ್ಯೂ ಇರುವ ಕಾರಣಕ್ಕೆ ಜನರು ಶನಿವಾರ, ಭಾನುವಾರ ಹೊರತುಪಡಿಸಿ, ಕಾರ್ಯಕ್ರಮಗಳನ್ನು ಆಯೋಜಿಸುತ್ತಾರೆ’ ಎಂದರು.

‘ಜಿಲ್ಲೆಯಲ್ಲಿ ಪಡಿತರಕ್ಕೆ ಕುಚಲಕ್ಕಿ ವಿತರಿಸಲು ಮತ್ತು ಜಿಲ್ಲೆಗೆ ಪ್ರತ್ಯೇಕ ಮರಳು ನೀತಿ ಜಾರಿಗೊಳಿಸುವಂತೆ ಶಾಸಕರು ಒಂದು ವರ್ಷದ ಹಿಂದೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದರು. ಅದು ಇನ್ನೂ ಜಾರಿಗೊಂಡಿಲ್ಲ’ ಎಂದು ಆರೋಪಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.