ಮಂಗಳವಾರ, ಜೂನ್ 22, 2021
29 °C
641 ಜನರು ಗುಣಮುಖ; 246 ಮಂದಿಗೆ ಕೋವಿಡ್ ದೃಢ

ಸಕ್ರಿಯಕ್ಕಿಂತ 3 ಪಟ್ಟು ಜನ ಗುಣಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಜಿಲ್ಲೆಯಲ್ಲಿ ಕೋವಿಡ್‌–19 ಪ್ರಕರಣಗಳು ವರದಿಯಾಗುತ್ತಿದ್ದರೂ, ಚೇತರಿಕೆಯ ಪ್ರಮಾಣ ಹೆಚ್ಚಾಗಿದೆ. ಸದ್ಯ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳಿಗಿಂತ ಮೂರು ಪಟ್ಟು ಜನರು ಗುಣಮುಖರಾಗಿದ್ದಾರೆ. ಗುರುವಾರವೂ ಇದು ಮುಂದುವರಿದಿದ್ದು, ಒಂದೇ ದಿನ ಗರಿಷ್ಠ 641 ಮಂದಿ ಚೇತರಿಸಿಕೊಂಡಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 8,071 ಕೋವಿಡ್–19 ಪ್ರಕರಣಗಳು ದೃಢಪಟ್ಟಿವೆ. ಈ ಪೈಕಿ 5,873 ಮಂದಿ ಗುಣಮುಖರಾಗಿದ್ದು, 1,946 ಸಕ್ರಿಯ ಪ್ರಕರಣಗಳಿವೆ. ಇನ್ನು 250 ಮಂದಿ ಮೃತಪಟ್ಟಿದ್ದಾರೆ.

ಗುರುವಾರ ಗುಣಮುಖರಾದವರ ಪೈಕಿ ಮನೆಯಲ್ಲಿಯೇ ಐಸೋಲೇಷನ್‌ಗೆ ಒಳಗಾಗಿದ್ದವರ ಸಂಖ್ಯೆಯೇ ಅಧಿಕವಾಗಿದೆ. ರೋಗಲಕ್ಷಣ ಇಲ್ಲದೇ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ 429 ಮಂದಿ, ಕೋವಿಡ್ ಕೇರ್‌ ಸೆಂಟರ್‌ಗಳಲ್ಲಿದ್ದ 100 ಜನರು ಹಾಗೂ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 112 ಜನರು ಗುಣಮುಖರಾಗಿದ್ದಾರೆ.

246 ಜನರು ಕೋವಿಡ್‌: ಜಿಲ್ಲೆಯಲ್ಲಿ ಗುರುವಾರ 246 ಮಂದಿಗೆ ಕೋವಿಡ್–19 ದೃಢವಾಗಿದೆ. ಈ ಪೈಕಿ 67 ಪುರುಷರು ಹಾಗೂ 34 ಮಹಿಳೆಯರು ಸೇರಿದಂತೆ 101 ಜನರಲ್ಲಿ ಮಾತ್ರ ರೋಗ ಲಕ್ಷಣಗಳು ಕಂಡು ಬಂದಿವೆ. 87 ಪುರುಷರು ಹಾಗೂ 58 ಮಹಿಳೆಯರು ಸೇರಿದಂತೆ 145 ಮಂದಿಗೆ ಯಾವುದೇ ರೋಗಲಕ್ಷಣಗಳು ಇಲ್ಲ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

ಗುರುವಾರ ದೃಢವಾಗಿರುವವರ ಪೈಕಿ ಐಎಲ್‌ಐ ಪ್ರಕರಣಗಳೇ ಅಧಿಕವಾಗಿವೆ. 103 ಐಎಲ್‌ಐ, 10 ಎಸ್‌ಎಆರ್‌ಐ ಪ್ರಕರಣಗಳಿವೆ. 36 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ತಗಲಿದ್ದು, 97 ಜನರ ಸೋಂಕಿನ ಮೂಲವನ್ನು ಪತ್ತೆ ಮಾಡಲಾಗುತ್ತಿದೆ. ಮಂಗಳೂರು ತಾಲ್ಲೂಕಿನಲ್ಲಿ 150, ಬಂಟ್ವಾಳದಲ್ಲಿ 47, ಪುತ್ತೂರಿನಲ್ಲಿ 16, ಸುಳ್ಯದಲ್ಲಿ 7, ಬೆಳ್ತಂಗಡಿ ತಾಲ್ಲೂಕಿನಲ್ಲಿ 15 ಹಾಗೂ ಇತರ ಜಿಲ್ಲೆಗಳ 11 ಜನರಿಗೆ ಕೋವಿಡ್–19 ದೃಢವಾಗಿದೆ.

6 ಸಾವು: ವಿವಿಧ ರೋಗಗಳಿಂದ ಬಳಲುತ್ತಿದ್ದ 6 ಮಂದಿ ಮೃತಪಟ್ಟಿದ್ದು, ಅವರಿಗೆ ಕೋವಿಡ್–19 ಇರುವುದು ಗುರುವಾರ ದೃಢವಾಗಿದೆ.
ಮಂಗಳೂರು ತಾಲ್ಲೂಕಿನ ಮೂವರು, ಬಂಟ್ವಾಳ ತಾಲ್ಲೂಕಿನ ಒಬ್ಬರು ಹಾಗೂ ಇತರ ಜಿಲ್ಲೆಗಳ ಮೂವರು ಮೃತಪಟ್ಟಿದ್ದಾರೆ. ಇದರಿಂದಾಗಿ ಮೃತರ ಸಂಖ್ಯೆ 250ಕ್ಕೆ ಏರಿಕೆಯಾಗಿದೆ.

ಕಾಸರಗೋಡು: 79 ಮಂದಿಗೆ ಕೋವಿಡ್

ಕಾಸರಗೋಡು ಜಿಲ್ಲೆಯಲ್ಲಿ ಗುರುವಾರ 79 ಜನರಿಗೆ ಕೋವಿಡ್– 19 ದೃಢಪಟ್ಟಿದೆ. 72 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದ್ದು, 5 ಜನರ ಸಂಪರ್ಕವನ್ನು ಪತ್ತೆ ಮಾಡಲಾಗುತ್ತಿದೆ. ಈ ಪೈಕಿ ನಾಲ್ವರು ವಿದೇಶದಿಂದ ಬಂದಿದ್ದು, ಮೂವರು ಬೇರೆ ರಾಜ್ಯದಿಂದ ಬಂದಿದ್ದಾರೆ. ಒಬ್ಬರು ಆರೋಗ್ಯ ಕಾರ್ಯಕರ್ತರಿಗೂ ಸೋಂಕು ತಗಲಿದೆ.

ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಿಲ್ಲೆಯ 29 ಜನರು ಗುಣಮುಖರಾಗಿದ್ದಾರೆ. ಒಟ್ಟು 3,083 ಮಂದಿಗೆ ಕೋವಿಡ್–19 ದೃಢವಾಗಿದ್ದು, 1,072 ಸಕ್ರಿಯ ಪ್ರಕರಣಗಳಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.