ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರೆಡ್‌ಕ್ರಾಸ್‌: ಅಂತಿಮ ಹಂತದಲ್ಲಿ ಶತಮಾನೋತ್ಸವ ಭವನ

Published 24 ಮೇ 2024, 4:31 IST
Last Updated 24 ಮೇ 2024, 4:31 IST
ಅಕ್ಷರ ಗಾತ್ರ

ಮಂಗಳೂರು: ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ಶತಮಾನೋತ್ಸವದ ಅಂಗವಾಗಿ ರೆಡ್‌ಕ್ರಾಸ್ ಸೊಸೈಟಿ ಜಿಲ್ಲಾ ಶಾಖೆ ಜಿಲ್ಲಾಧಿಕಾರಿ ಕಚೇರಿ ಬಳಿ ನಿರ್ಮಿಸುತ್ತಿರುವ ಶತಮಾನೋತ್ಸವ ಕಟ್ಟಡ 6 ತಿಂಗಳೊಳಗೆ ಉದ್ಘಾಟನೆಯಾಗಲಿದೆ ಎಂದು ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿ ಚೇರ್ಮನ್ ಶಾಂತಾರಾಮ ಶೆಟ್ಟಿ ತಿಳಿಸಿದರು.

16 ಸಾವಿರ ಚದರ ಅಡಿ ವಿಸ್ತೀರ್ಣದ, 3 ಅಂತಸ್ತಿನ ಕಟ್ಟಡವನ್ನು ಅಂದಾಜು ₹ 6 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ರೆಡ್‌ಕ್ರಾಸ್ ಸೊಸೈಟಿ ಅಧ್ಯಕ್ಷ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಇತ್ತೀಚೆಗೆ ಕಟ್ಟಡದ ಕಾಮಗಾರಿಯನ್ನು ವೀಕ್ಷಿಸಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ ಎಂದು ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಸರ್ಕಾರಿ ಲೇಡಿಗೋಷನ್ ಆಸ್ಪತ್ರೆಯ ಆವರಣದಲ್ಲಿರುವ ರೆಡ್‌ಕ್ರಾಸ್ ಸೊಸೈಟಿಯ ರಕ್ತನಿಧಿಯಿಂದ ನವಜಾತ ಶಿಶುಗಳ ತಾಯಂದಿರಿಗೆ ಪ್ರತಿ ವರ್ಷ 6 ಸಾವಿರ ಯುನಿಟ್ ರಕ್ತವನ್ನು ಉಚಿತವಾಗಿ ಪೂರೈಸುತ್ತಿದೆ. ಇದಕ್ಕೆ ಪರ್ಯಾಯ ರಕ್ತವನ್ನು ಪಡೆಯುತ್ತಿಲ್ಲ. ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾದವರಿಗೆ ಶೇಕಡ 50ರ ರಿಯಾಯಿತಿ ದರದಲ್ಲಿ ರಕ್ತ ಪೂರೈಸಲಾಗುತ್ತಿದೆ. ಭವಿಷ್ಯದಲ್ಲಿ ಮಂಗಳೂರಿನ ಯಾವುದೇ ಆಸ್ಪತ್ರೆಯಲ್ಲಿ ದಾಖಲಾಗುವ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಉಚಿತವಾಗಿ ರಕ್ತ ಪೂರೈಸುವ ಸಿದ್ಧತೆ ನಡೆಯುತ್ತಿದೆ ಎಂದು ಅವರು ಹೇಳಿದರು.

ಮೋಹನ್ ಶೆಟ್ಟಿ, ಯತೀಶ್ ಬೈಕಂಪಾಡಿ, ಪುಷ್ಪರಾಜ್ ಜೈನ್, ವಿಠ್ಠಲ, ಗುರುದತ್ ಕಾಮತ್, ಡಾ.ಸುಮನ ಬೋಳಾರ್, ಪಿ.ಬಿ.ಹರೀಶ್ ರೈ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT