ಬುಧವಾರ, ಸೆಪ್ಟೆಂಬರ್ 22, 2021
28 °C
ಪ್ರಮಾಣಪತ್ರ ಉಚಿತವಾಗಿ ಪಡೆಯಿರಿ: ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.

ಮಂಗಳೂರು: ಜನನ, ಮರಣ 21 ದಿನದಲ್ಲಿ ನೋಂದಾಯಿಸಿಕೊಂಡಲ್ಲಿ ಪ್ರಮಾಣಪತ್ರ ಉಚಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಜಿಲ್ಲೆಯ ನಾಗರಿಕರು ತಮ್ಮ ಕುಟುಂಬದಲ್ಲಿ ಸಂಭವಿಸುವ ಜನನ ಅಥವಾ ಮರಣಗಳನ್ನು ಸ್ಥಳೀಯ ನೋಂದಣಿ ಕಚೇರಿಯಲ್ಲಿ 21 ದಿನದೊಳಗೆ ನೋಂದಾಯಿಸಿಕೊಂಡಲ್ಲಿ, ಸಂಬಂಧಿಸಿದ ಪ್ರಮಾಣಪತ್ರವನ್ನು ಉಚಿತವಾಗಿ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದರು.

ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳ ಲಾಗಿದ್ದ ಜನನ-ಮರಣ ನೋಂದಣಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 21 ದಿನದ ನಂತರ ನೋಂದಣಿ ಮಾಡಿ ಕೊಂಡಲ್ಲಿ ಶುಲ್ಕ ಪಾವತಿಸಬೇಕಾ ಗುತ್ತದೆ. 21 ದಿನದೊಳಗೆ ನೋಂದಣಿ ಮಾಡಿಕೊಂಡು ಪ್ರಮಾಣಪತ್ರ ಪಡೆಯ
ಬಹುದು, ಜನನ-ಮರಣ ನೋಂದಣಿ ಯನ್ನು ಅಧಿನಿಯಮ 1969 ರನ್ವಯ ಕಡ್ಡಾಯ ಮಾಡಲಾಗಿದೆ ಎಂದರು.

ಜನನ, ಮರಣ ನೋಂದಣಿ ಮಾಡಲು ಆನ್‌ಲೈನ್ ವ್ಯವಸ್ಥೆ ಜಾರಿಗೆ ತಂದಿದ್ದು, ಗಣಕೀಕೃತ ಪ್ರಮಾಣಪತ್ರ ವಿತರಿಸಲಾಗುತ್ತಿದೆ. ಗ್ರಾಮ ಲೆಕ್ಕಗರು, ಸರ್ಕಾರಿ ವೈದ್ಯಾಧಿಕಾರಿಗಳು, ಆರೋ ಗ್ಯಾಧಿಕಾರಿಗಳು ಮತ್ತು ಆರೋಗ್ಯ ನಿರೀಕ್ಷಕರು, ಮನೆಯಲ್ಲಿ ಸಂಭವಿಸುವ ಜನನಗಳ ವರದಿ ಪಡೆದು, 21 ದಿನದೊಳಗೆ ಸಂಬಂಧಿಸಿದವರಿಗೆ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಸಿ, ಪ್ರಮಾಣಪತ್ರಗಳನ್ನು ವಿತರಿಸುವಂತೆ ಸೂಚಿಸಿದರು.

ಪ್ರತಿಯೊಂದು ಜನನ-ಮರಣ ಮತ್ತು ನಿರ್ಜೀವ ಜನನ ಘಟನೆಗಳು ನೋಂದಣಿ ಆಗಬೇಕು. ನೋಂದಣಿಯು ಶೇ 100 ರಷ್ಟು ತಲುಪಬೇಕು ಎಂಬ ಉದ್ದೇಶದಿಂದ ಆನ್‌ಲೈನ್ ನೋಂದಣಿ ಮಾಡಲಾಗುತ್ತಿದೆ, ಸಾರ್ವಜ ನಿಕರು ಇದನ್ನು ಸದುಪಯೋಗ ಪಡಿಸಿಕೊಳ್ಳ ಬೇಕು ಎಂದು ಸಲಹೆ ನೀಡಿದರು.

ಜನನ ಮತ್ತು ನೋಂದಣಿ ನಿಯಮಗಳ ಸೆಕ್ಷನ್ 18ರ ಪ್ರಕಾರ ಜಿಲ್ಲೆಯ ಎಲ್ಲ ನೋಂದಣಿ ಘಟಕವು ನಿಯಮಾನುಸಾರ ನೋಂದಣಿ ಚಟುವಟಿಕೆ ನಡೆಯುತ್ತಿರುವ ಬಗ್ಗೆ ಹಾಗೂ ಶೇ 100ರಷ್ಟು ಘಟನೆಗಳು ದಾಖಲಾಗಿರುವ ಬಗ್ಗೆ ಕಂದಾಯ, ನಗರಾಭಿವೃದ್ಧಿ ಮತ್ತು ಸಾಂಖ್ಯಿಕ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಬೇಕು ಎಂದು ನಿರ್ದೇಶನ ನೀಡಿದರು.

2021ರ ಜನವರಿಯಿಂದ ಜೂನ್‌ವರೆಗೆ ಜಿಲ್ಲೆಯಲ್ಲಿ ಒಟ್ಟು 12,536 ಜನನ ಹಾಗೂ 11,827 ಮರಣಗಳು ವರದಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಎಡಿಸಿ ಡಾ. ಪ್ರಜ್ಞಾ ಅಮ್ಮೆಂಬಳ, ಜಿಲ್ಲಾ ಸಂಖ್ಯಾ ಸಂಗ್ರಹಾಣಾಧಿಕಾರಿ ವಿನಾಯಕ ಎನ್. ಮಹಾಲೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕಿಶೋರ್ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು