ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಆಳ್ವಾಸ್ ವೈಭವ’ ಅರ್ಪಣಾ ಗೀತೆಯ ಬಿಡುಗಡೆ 

Published 4 ಮೇ 2024, 5:04 IST
Last Updated 4 ಮೇ 2024, 5:04 IST
ಅಕ್ಷರ ಗಾತ್ರ

ಮೂಡುಬಿದಿರೆ: ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಜೀವನದ ಹಾದಿಯಲ್ಲಿ, ಪ್ರತಿ ಹಂತದ ಬೆಳವಣಿಗೆಯನ್ನು ದಾಖಲಿಸಿಡುವ ಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹೇಳಿದರು.

ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಶುಕ್ರವಾರ, ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಹೊರತಂದ ಆಳ್ವಾಸ್ ವೈಭವ ಅರ್ಪಣಾ ಗೀತೆಯ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇಂದಿನ ದಿನಗಳಲ್ಲಿ ದಾಖಲೆ ಇಲ್ಲದೆ ಇದ್ದರೆ ಯಾರೂ ನಮ್ಮನ್ನು ಒಪ್ಪಿಕೊಳ್ಳುವುದಿಲ್ಲ. ನಮ್ಮ ಸಾಧನೆಗಳನ್ನು ಮೌಖಿಕವಾಗಿ ಹೇಳಿಕೊಳ್ಳುವುದರಿಂದ ಯಾವುದೇ ಪ್ರಯೋಜನವಿಲ್ಲ. ವಿದ್ಯಾರ್ಥಿಗಳು ದಿನ ನಿತ್ಯದ ಚಟುವಟಿಕೆಗಳನ್ನು ದಾಖಲೀಕರಿಸುವ ಪ್ರವೃತ್ತಿಯನ್ನು ಬೆಳೆಸಿಕೊಂಡಾಗ, ಭವಿಷ್ಯದಲ್ಲಿ ಉಪಯೋಗಕ್ಕೆ ಬರಲಿದೆ ಎಂದರು.

ಸಾಹಿತ್ಯ, ಸಂಕಲನ ಹಾಗೂ ನಿರ್ದೇಶನ ಮಾಡಿದ ಸಂಕೇತ್ ಮುಳುಗುಂದ್ ಅನುಭವ ಹಂಚಿಕೊಂಡರು.

ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಕುರಿಯನ್, ಸಂಗೀತ ನಿರ್ದೇಶಕ ಗೌತಮ್ ಕೆ., ನಿರ್ದೇಶನ ವಿಭಾಗದ ದರ್ಶನ್, ಗೌತಮ್ ಕುಮಾರ್, ಸಾತ್ವಿಕ್, ಸಿನಿಮಾಟೋಗ್ರಾಫರ್ ವಿನೀತ್‌ರಾಜ್‌, ಗಾಯಕಿ ಆಶಿಕಾ ಆಚಾರ್ಯ ಭಾಗವಹಿಸಿದ್ದರು. ಯೋಗೀಶ್ ಕೈರೋಡಿ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT