ಸೋಮವಾರ, ಜೂನ್ 21, 2021
27 °C
ಪಚ್ಚನಾಡಿಗೆ ಭೇಟಿ ನೀಡಿದ ಸಚಿವ ಭೈರತಿ‌ ಬಸವರಾಜ

ತುಂಬೆ: ಸಂತ್ರಸ್ತ ರೈತರಿಗೆ ಪರಿಹಾರ- ಸಿಎಂ‌ ಜತೆ ಚರ್ಚೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಮಂಗಳೂರು: ತುಂಬೆ ಕಿಂಡಿ ಅಣೆಕಟ್ಟೆಯಲ್ಲಿ 7 ಮೀಟರ್ ನೀರು ನಿಲ್ಲಿಸಿದರೆ, 344 ಎಕರೆ ಜಮೀನು ಮುಳುಗಡೆ ಆಗಲಿದ್ದು, 130 ಕೋಟಿ ಅನುದಾ‌ನ ಅಗತ್ಯವಾಗಿದೆ. ಈ ಕುರಿತು ಮುಖ್ಯಮಂತ್ರಿ ಜತೆ ಚರ್ಚಿಸುವುದಾಗಿ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಹೇಳಿದರು.

ಪಚ್ಚನಾಡಿ ಪ್ರದೇಶದಲ್ಲಿ ತ್ಯಾಜ್ಯ ಕುಸಿತಕ್ಕೆ ಸಂಬಂಧಿಸಿದಂತೆ ಸರ್ಕಾರ ಈಗಾಗಲೇ ₹8 ಕೋಟಿ ಬಿಡುಗಡೆ ಮಾಡಿದೆ. ಮಳೆಗಾಲ ಆರಂಭಕ್ಕೂ ಮುನ್ನ ಪಚ್ಚನಾಡಿಯಲ್ಲಿ ತಡೆಗೋಡೆ ನಿರ್ಮಾಣ ಮಾಡಲು ಸೂಚಿಸಲಾಗಿದೆ. ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಿದರೆ, ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಕರಂಗಲ್ಪಾಡಿಯಲ್ಲಿ ತಡೆಗೋಡೆ ಕುಸಿದು ಇಬ್ಬರು ಮೃತಪಟ್ಟಿದ್ದು, ಪ್ರಕರಣದ ತನಿಖೆಗೆ ಸೂಚಿಸಲಾಗಿದೆ. ಇಬ್ಬರು ಅಧಿಕಾರಿಗಳಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ಖಾಸಗಿ ಕಟ್ಟಡದ ಗುತ್ತಿಗೆದಾರರೂ ಮೃತರಿಗೆ ₹5 ಲಕ್ಷ ಪರಿಹಾರ ನೀಡಲು ಒಪ್ಪಿಕೊಂಡಿದ್ದು, ಅದನ್ನು ಮೃತರ ಕುಟುಂಬಗಳಿಗೆ ವಿತರಿಸಲಾಗುವುದು ಎಂದು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು