ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಭಜನಾ ಸಂಸ್ಕೃತಿಯಿಂದ ಧರ್ಮ, ಸಂಸ್ಕೃತಿಯ ರಕ್ಷಣೆ: ಬಸವಣ್ಣಜ್ಜ

ಧರ್ಮಸ್ಥಳದಲ್ಲಿ 26ನೆ ವರ್ಷದ ಭಜನಾ ತರಬೇತಿ ಸಮಾರೋಪ
Published : 30 ಸೆಪ್ಟೆಂಬರ್ 2024, 4:41 IST
Last Updated : 30 ಸೆಪ್ಟೆಂಬರ್ 2024, 4:41 IST
ಫಾಲೋ ಮಾಡಿ
Comments

ಉಜಿರೆ: ಭಜನಾ ಸಂಸ್ಕೃತಿಯಿಂದ ನಮ್ಮ ಸನಾತನ ಧರ್ಮ ಮತ್ತು ಸಂಸ್ಕೃತಿಯ ರಕ್ಷಣೆ ಸಾಧ್ಯವಾಗುತ್ತದೆ ಎಂದು ಕುಂದಗೋಳ ಕಲ್ಯಾಣಪುರ ಮಠದ ಬಸವಣ್ಣಜ್ಜ ಹೇಳಿದರು.

ಭಾನುವಾರ ಧರ್ಮಸ್ಥಳದಲ್ಲಿ ನಡೆದ 26ನೇ ವರ್ಷದ ಭಜನಾ ತರಬೇತಿ ಸಮಾರೋಪದಲ್ಲಿ ಅವರು ಆಶೀರ್ವಚನ ನೀಡಿದರು.

ಭಜನಾ ತರಬೇತಿ ಪಡೆದವರು ಧರ್ಮ ಮತ್ತು ಸಂಸ್ಕೃತಿಯ ಸಂರಕ್ಷಣೆಯ ರೂವಾರಿಗಳಾಗಿ ಆರೋಗ್ಯಪೂರ್ಣ ಸಮಾಜ ರೂಪಿಸಬೇಕೆಂದು ಸ್ವಾಮೀಜಿ ಸಲಹೆ ನೀಡಿದರು.

ಸಂಸದ ಬ್ರಿಜೇಶ್ ಚೌಟ ಮಾತನಾಡಿ, ಭಜನೆಯಿಂದ ನಮ್ಮ ಪರಂಪರೆ ಮತ್ತು ಸಂಸ್ಕೃತಿಯನ್ನು ರಕ್ಷಿಸಬಹುದು ಎಂದರು.

‌ವಿಧಾನಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್ ಭಜನೆ ಹಾಡಿದರು.

ಶಾಸಕ ಹರೀಶ್ ಪೂಂಜ ಮಾತನಾಡಿ, ಮಕ್ಕಳಲ್ಲಿ ಮತ್ತು ಯುವಕರಲ್ಲಿ ಭಜನಾ ಸಂಸ್ಕೃತಿ ಬೆಳೆಸಬೇಕು ಎಂದು ಸಲಹೆ ನೀಡಿದರು.

ರಾಸಾಯನಿಕಗಳನ್ನು ಬಳಸಿ ಬೆಳೆಸಿದ ವಿಷಪೂರಿತ ಆಹಾರಗಳ ಸೇವನೆಯಿಂದ ನಮ್ಮ ಆರೋಗ್ಯಕ್ಕೆ ಹಾನಿಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಕ್ಯಾನ್ಸರ್ ರೋಗಿಗಳು ಇದ್ದು, ನಾವು ಹೊಲ, ತೋಟಗಳಲ್ಲಿ ಭತ್ತ, ತರಕಾರಿ ಬೆಳೆಸಿ ಬಳಸಬೇಕೆಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಮಾತನಾಡಿ, ಎಲ್ಲರೂ ಅಂತರಂಗ ಮತ್ತು ಬಹಿರಂಗ ಶುದ್ಧಿಯೊಂದಿಗೆ ಭಜನೆ ಮಾಡಿದಾಗ ಆತ್ಮಶುದ್ಧಿಯಾಗುತ್ತದೆ. ಮಾನಸಿಕ ಸುಖ-ಶಾಂತಿ, ನೆಮ್ಮದಿ ಸಿಗುತ್ತದೆ ಎಂದು ಹೇಳಿದರು.

ಭಜನೆ ಮಾಡುವವರು ಎಂದೂ ದುಶ್ಚಟಗಳಿಗೆ ಬಲಿಯಾಗದೆ ಆದರ್ಶ ಹಾಗೂ ಸಾರ್ಥಕ ಜೀವನ ನಡೆಸಬೇಕೆಂದು ಹೇಳಿದರು.

ಶಿಬಿರಾರ್ಥಿಗಳ ಪರವಾಗಿ ಉಮೇಶ್ ಶೆಟ್ಟಿ ಅನಿಸಿಕೆ ವ್ಯಕ್ತಪಡಿಸಿದರು.

ಭಜನಾ ಕಮ್ಮಟದ ಕಾರ್ಯದರ್ಶಿ ಎ.ವಿ.ಶೆಟ್ಟಿ ವರದಿ ಸಾದರಪಡಿಸಿದರು. ಮಾಣಿಲದ ಮೋಹನದಾಸ ಸ್ವಾಮೀಜಿ, ಹೇಮಾವತಿ ವೀ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್, ಡಿ.ಹರ್ಷೇಂದ್ರ ಕುಮಾರ್ ಭಾಗವಹಿಸಿದ್ದರು.

ಭಜನಾ ಕಮ್ಮಟದ ಸಂಚಾಲಕ ಸುಬ್ರಹ್ಮಣ್ಯಪ್ರಸಾದ್ ಸ್ವಾಗತಿಸಿದರು.

ಧನ್ಯಕುಮಾರ್ ವಂದಿಸಿದರು. ಶ್ರೀನಿವಾಸ ರಾವ್ ಧರ್ಮಸ್ಥಳ ಕಾರ್ಯಕ್ರಮ ನಿರ್ವಹಿಸಿದರು.

ಭಜನಾಪಟುಗಳಿಂದ ಆಕರ್ಷಕ ಶೋಭಾಯಾತ್ರೆ ನಡೆಯಿತು
ಭಜನಾಪಟುಗಳಿಂದ ಆಕರ್ಷಕ ಶೋಭಾಯಾತ್ರೆ ನಡೆಯಿತು
ಭಜನಾಪಟುಗಳಿಂದ ಆಕರ್ಷಕ ಶೋಭಾಯಾತ್ರೆ ನಡೆಯಿತು.
ಭಜನಾಪಟುಗಳಿಂದ ಆಕರ್ಷಕ ಶೋಭಾಯಾತ್ರೆ ನಡೆಯಿತು.
ಭಜನಾಪಟುಗಳಿಂದ ಆಕರ್ಷಕ ಶೋಭಾಯಾತ್ರೆ ನಡೆಯಿತು.
ಭಜನಾಪಟುಗಳಿಂದ ಆಕರ್ಷಕ ಶೋಭಾಯಾತ್ರೆ ನಡೆಯಿತು.
ಭಜನಾಪಟುಗಳಿಂದ ಆಕರ್ಷಕ ಶೋಭಾಯಾತ್ರೆ ನಡೆಯಿತು.
ಭಜನಾಪಟುಗಳಿಂದ ಆಕರ್ಷಕ ಶೋಭಾಯಾತ್ರೆ ನಡೆಯಿತು.
ಭಜನಾಪಟುಗಳಿಂದ ಆಕರ್ಷಕ ಶೋಭಾಯಾತ್ರೆ ನಡೆಯಿತು.
ಭಜನಾಪಟುಗಳಿಂದ ಆಕರ್ಷಕ ಶೋಭಾಯಾತ್ರೆ ನಡೆಯಿತು.
ಭಜನಾಪಟುಗಳಿಂದ ಆಕರ್ಷಕ ಶೋಭಾಯಾತ್ರೆ ನಡೆಯಿತು.
ಭಜನಾಪಟುಗಳಿಂದ ಆಕರ್ಷಕ ಶೋಭಾಯಾತ್ರೆ ನಡೆಯಿತು.
ಭಜನಾಪಟುಗಳಿಂದ ಆಕರ್ಷಕ ಶೋಭಾಯಾತ್ರೆ ನಡೆಯಿತು.
ಭಜನಾಪಟುಗಳಿಂದ ಆಕರ್ಷಕ ಶೋಭಾಯಾತ್ರೆ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT