ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಉಳ್ಳಾಲ | ಸಮುದ್ರಪಾಲಾಗುತ್ತಿದ್ದ ಮೂವರ ರಕ್ಷಣೆ: ಮಹಿಳೆ ಸಾವು

Published 11 ಜೂನ್ 2024, 5:27 IST
Last Updated 11 ಜೂನ್ 2024, 5:27 IST
ಅಕ್ಷರ ಗಾತ್ರ

ಉಳ್ಳಾಲ: ಇಲ್ಲಿನ ಸಮುದ್ರತೀರಕ್ಕೆ ವಿಹಾರಕ್ಕೆ ಬಂದಿದ್ದ ಆಂಧ್ರಪ್ರದೇಶದ ನಾಲ್ವರು ಮಹಿಳೆಯರಲ್ಲಿ ಒಬ್ಬರು ಸಮುದ್ರಪಾಲಾಗಿದ್ದು, ಉಳಿದ ಮೂವರನ್ನು ಸ್ಥಳೀಯರು ರಕ್ಷಿಸಿದ್ದಾರೆ‌.

ಆಂಧ್ರಪ್ರದೇಶದ ಕೊಂಡಾಪುರದ ಸಿರಿಲಿಂಗಪಲ್ಲಿ ನಿವಾಸಿ ಪಿ.ಎಲ್. ಪ್ರಸನ್ನ ಎಂಬುವವರ ಪತ್ನಿ ಪರಿಮಿ ರತ್ನ ಕುಮಾರಿ (57) ಮೃತಪಟ್ಟವರು. ಉಳ್ಳಾಲ ಕಡಲತೀರದಲ್ಲಿ ವಿಹರಿಸುತ್ತಿದ್ದ ಸಂದರ್ಭದಲ್ಲಿ ಬೃಹತ್ ಗಾತ್ರದ ಅಲೆಯೊಂದು ಅಪ್ಪಳಿಸಿ ನಾಲ್ವರು ಮಹಿಳೆಯರನ್ನು ನೀರಿಗೆ ಎಳೆದೊಯ್ದಿತು. ಸ್ಥಳೀಯರು ತಕ್ಷಣ ನಾಲ್ವರನ್ನು ಸಮುದ್ರದಿಂದ ಹೊರಗೆಳೆದು ರಕ್ಷಿಸಿದ್ದಾರೆ. ಇವರಲ್ಲಿ ಪರಿಮಿ ರತ್ನ ಕುಮಾರಿ ಪ್ರಜ್ಞೆ ತಪ್ಪಿದ್ದರು. ತಕ್ಷಣ ಅವರನ್ನು ದೇರಳಕಟ್ಟೆ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ಅವರು ಮೃತಪಟ್ಟರು ಎಂದು ಮೂಲಗಳು ತಿಳಿಸಿವೆ.

ಹೈದರಾಬಾದ್‌ನಿಂದ ಐವರು ಮಹಿಳೆಯರು ಜೂನ್ 6ಕ್ಕೆ ವಿಮಾನದ ಮೂಲಕ ಮೈಸೂರಿಗೆ ಬಂದಿಳಿದಿದ್ದರು. ಅಲ್ಲಿ ಪ್ರವಾಸ ಮುಗಿಸಿದ ಅವರು ಕಾರಿನಲ್ಲಿ ಜೂ.7ಕ್ಕೆ ಕೊಡಗಿಗೆ ಹೋಗಿ, ಜೂ.9ಕ್ಕೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ, ಸೋಮವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಉಳ್ಳಾಲ ಸಮುದ್ರ ತೀರ ವಿಹಾರಕ್ಕೆ ಬಂದಿದ್ದರು ಎಂದು ಈ ಪ್ರವಾಸಿ ತಂಡದಲ್ಲಿದ್ದವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT