ಶನಿವಾರ, ಮಾರ್ಚ್ 28, 2020
19 °C
ಟ್ರೀ ಪಾರ್ಕ್‌ ನಿರ್ವಹಣಾ ಸಮಿತಿ ನಿರ್ಧಾರ

ಪ್ರವೇಶ ಶುಲ್ಕ ಪರಿಷ್ಕರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಮುಂದಿನ ದಿನಗಳಲ್ಲಿ ಟ್ರೀ ಪಾರ್ಕ್‌ನ ನಿರ್ವಹಣೆಗಾಗಿ ಸರ್ಕಾರದಿಂದ ಅನುದಾನ ಬಾರದೇ ಇರುವುದರಿಂದ, ಟ್ರೀ ಪಾರ್ಕ್‌ನ ಪ್ರವೇಶ ಶುಲ್ಕವನ್ನು ಪರಿಷ್ಕರಿಸಲಾಗುವುದು ಎಂದು ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಕರಿಕಾಳನ್ ತಿಳಿಸಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ತಣ್ಣೀರುಬಾವಿ ಟ್ರೀ ಪಾರ್ಕ್‌ನ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಟ್ರೀ ಪಾರ್ಕ್‌ನ ಪ್ರವೇಶ ಶುಲ್ಕದಿಂದ 6 ವರ್ಷದೊಳಗಿನ ಮಕ್ಕಳಿಗೆ ವಿನಾಯಿತಿ ಇದ್ದು, 6 ರಿಂದ 14 ವರ್ಷ ಪ್ರಾಯದವರಿಗೆ ₹ 10 ಮತ್ತು 14 ವರ್ಷ ಮೇಲ್ಪಟ್ಟವರಿಗೆ ₹20 ಹಾಗೂ ಸಾಮಾನ್ಯ ಕ್ಯಾಮೆರಾ ಉಪಯೋಗಕ್ಕೆ ₹25, ಝೂಂ ಕ್ಯಾಮೆರಾ, ಹ್ಯಾಂಡಿ ಕ್ಯಾಮೆರಾ ಬಳಸುವುದಕ್ಕೆ ₹50, ಸ್ಟ್ಯಾಂಡ್ ಕ್ಯಾಮೆರಾ ಬಳಸುವುದಕ್ಕೆ ₹100 ಮತ್ತು ಫೋಟೋ ಶೂಟ್‌ಗಳಿಗೆ ₹200 ರಂತೆ ಪರಿಷ್ಕರಿಸಲಾಗಿದೆ. ಪರಿಷ್ಕೃತ ಶುಲ್ಕವು ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಭೆಯಲ್ಲಿ ಮಂಗಳೂರು ವಲಯ ಅರಣ್ಯಾಧಿಕಾರಿ ಪಿ. ಶ್ರೀಧರ್, ಸಂಬಂಧಪಟ್ಟ ಇಲಾಖಾಧಿಕಾರಿಗಳು, ಪ್ರತಿನಿಧಿಗಳು ಉಪಸ್ಥಿತರಿದ್ದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)