ಸೋಮವಾರ, ಮಾರ್ಚ್ 8, 2021
24 °C

ರಸ್ತೆ ಅಪಘಾತ: ಐವರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿರಾ/ನೆಲ್ಯಾಡಿ: ಎರಡು ಪ್ರತ್ಯೇಕ ರಸ್ತೆ ಅಪಘಾತ ಪ್ರಕರಣದಲ್ಲಿ ಐವರು ಮೃತಪಟ್ಟಿದ್ದಾರೆ.

ಶಿರಾ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರ ಕಾಮತ್ ಹೋಟೆಲ್ ಮುಂಭಾಗ ವಿ.ಆರ್.ಎಲ್ ಲಾರಿಗೆ ಹಿಂದಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದಿದೆ. ಟಾಟಾ ಏಸ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಒಬ್ಬರು ಗಾಯಗೊಂಡಿದ್ದಾರೆ. ಮೃತರು ಬಳ್ಳಾರಿ ಜಿಲ್ಲೆಯವರು ಎಂದು ತಿಳಿದುಬಂದಿದ್ದು ಮೃತರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಿಲ್ಲ. ಕಳ್ಳಂಬೆಳ್ಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 ನೆಲ್ಯಾಡಿಯಲ್ಲಿ ಲಾರಿ-ಬೊಲೆರೋ ಜೀಪ್ ಅಪಘಾತ: ಉಪ್ಪಿನಂಗಡಿ ಸಮೀಪದ ರಾಷ್ಟ್ರಿಯ ಹೆದ್ದಾರಿ 75ರಲ್ಲಿ ನೆಲ್ಯಾಡಿಯಲ್ಲಿ ಸೋಮವಾರ ತಡ ರಾತ್ರಿ ಲಾರಿ ಮತ್ತು ಬೊಲೆರೋ ಡಿಕ್ಕಿಯಾಗಿ ಬೊಲೆರೋದಲ್ಲಿದ್ದ 3 ಮಂದಿ ಮೃತಪಟ್ಟಿದ್ದಾರೆ. ನೆಲ್ಯಾಡಿ ಪರಿಸರ ನಿವಾಸಿಗಳಾದ ಅಬ್ದುಲ್ ಸತ್ತಾರ್, ಶೈಲೇಶ್, ಶ್ಯಾಂಸನ್ ಮೃತಪಟ್ಟಿದ್ದಾರೆ. ಉಪ್ಪಿನಂಗಡಿ ಮತ್ತು ಪುತ್ತೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು