ಪುತ್ತೂರು: ಎಕ್ಸಿಲೇಟರ್ ಜಾಮ್ ಆಗಿ ಚಾಲಕನ ನಿಯಂತ್ರಣ ಕಳೆದುಕೊಂಡು ಕಾರು ಹಿಮ್ಮುಖವಾಗಿ ಚಲಿಸಿ ಅಂಗಡಿಗೆ ಡಿಕ್ಕಿಯಾಗಿ ಅಲ್ಲಿದ್ದ ಇಬ್ಬರು ಗಾಯಗೊಂಡ ಘಟನೆ ಪುತ್ತೂರು ನಗರದ ಕಿಲ್ಲೆ ಮೈದಾನದ ಬಳಿ ಗುರುವಾರ ನಡೆದಿದೆ.

ಕಿಲ್ಲೆ ಮೈದಾನದಲ್ಲಿ ನಡೆಯುತ್ತಿರುವ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ತಾತ್ಕಾಲಿಕವಾಗಿ ನಿರ್ಮಿಸಿದ್ದ ಚರ್ಮುರಿ ಅಂಗಡಿಗೆ ಕಾರು ಡಿಕ್ಕಿಯಾಗಿದ್ದು, ಅಂಗಡಿಯಲ್ಲಿದ್ದ ರಮೇಶ್ ಹಾಗೂ ಮಹಿಳೆ ಗಾಯಗೊಂಡಿದ್ದಾರೆ.

ಕಾಸರಗೋಡಿನ ವೆಂಕಟ್ರಮಣ ಭಟ್ ಎಂಬುವರು ಕಾರು ಚಲಾಯಿಸುವ ವೇಳೆ ಅವಘಡ ನಡೆದಿದೆ.

ಗಾಯಾಳುಗಳನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ. ಪುತ್ತೂರು ಸಂಚಾರ ಪೊಲೀಸರು ಕಾರನ್ನು ಠಾಣೆಗೆ ಕೊಂಡೊಯ್ದು, ಚಾಲಕನ ವಿಚಾರಣೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.