ಪುತ್ತೂರು: ಲಾರಿ ಮತ್ತು ಜೀಪ್ ಅಪಘಾತಕ್ಕೀಡಾಗಿ ಜೀಪು ಚಾಲಕ ಗಾಯಗೊಂಡ ಘಟನೆ ಪುತ್ತೂರು ನಗರದ ಹೊರವಲಯದ ಮುಕ್ರಂಪಾಡಿ ಎಂಬಲ್ಲಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ.

ಒಳಮೊಗ್ರು ಗ್ರಾಮದ ಅಜ್ಜಿಕಲ್ಲು ಸಮೀಪದ ದೇವಸ್ಯ ನಿವಾಸಿ, ಕಾಂಗ್ರೆಸ್ ಬೂತ್ ಸಮಿತಿ ಅಧ್ಯಕ್ಷ ಮನೋಜ್ ಗಾಯಗೊಂಡವರು.

ಪುತ್ತೂರಿನಿಂದ ಸುಳ್ಯ ಕಡೆಗೆ ಹೋಗುತ್ತಿದ್ದ ಲಾರಿ ಮತ್ತು ಸಂಪ್ಯ ಕಡೆಯಿಂದ ಪುತ್ತೂರು ಕಡೆಗೆ ಮನೋಜ್ ಅವರು ಚಲಾಯಿಸಿಕೊಂಡು ಬರುತ್ತಿದ್ದ ಜೀಪು ನಡುವೆ ಅಪಘಾತ ನಡೆದಿದೆ.

ಅದೇ ರಸ್ತೆಯಾಗಿ ಬರುತ್ತಿದ್ದ ಯುವ ಕಾಂಗ್ರೆಸ್ ರಾಜ್ಯ ಘಟಕದ ಕಾರ್ಯದರ್ಶಿ ಶ್ರೀಪ್ರಸಾದ್ ಪಾಣಾಜೆ, ಯುವ ಕಾಂಗ್ರೆಸ್ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಫಾರೂಕ್ ಪೆರ್ನೆ ಅವರು ಜೀಪ್ನೊಳಗೆ ಸಿಲುಕಿದ್ದ ಮನೋಜ್ ಅವರನ್ನು ಹೊರತೆಗೆದು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.