ಶುಕ್ರವಾರ, ಜೂನ್ 25, 2021
29 °C

ಡಿವೈಡರ್ ಹಾರಿದ ಕಾರು: ತಾಯಿ ಸಾವು , ಮಗಳು ಗಂಭೀರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಳ್ಳಾಲ: ತೊಕ್ಕೊಟ್ಟು ಫ್ಲೈಓವರ್ ನಲ್ಲಿ ಕಾರು ಡಿವೈಡರ್ ಹಾರಿ ಸ್ಕೂಟರಿಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರಿನಲ್ಲಿದ್ದ ತಾಯಿ ಫ್ಲೈಓವರಿನಿಂದ ಕೆಳಗೆ ರಸ್ತೆಗೆ ಬಿದ್ದು ಮೃತಪಟ್ಟಿದ್ದು,  ಮಗಳು ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕುಂಪಲ ನಿವಾಸಿ ವಸಂತಿ (50) ಮೃತರು. ಪುತ್ರಿ ಶ್ರೀಜಾ ( 20) ಎಂಬವರನ್ನು ಗಂಭೀರ ಸ್ಥಿತಿಯಲ್ಲಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ವಿವರ: ಕುಂಪಲ ಕಡೆಯಿಂದ  ಕಲ್ಲಾಪುವಿನತ್ತ ಸ್ಕೂಟರಿನಲ್ಲಿದ್ದ ತಾಯಿ ಮಗಳಿಗೆ , ಮಂಗಳೂರಿನಿಂದ ತಲಪಾಡಿಯತ್ತ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಫ್ಲೈಓವರ್ ಮೇಲೆ ಕಾರು ಚಾಲಕ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ  ಸ್ಕೂಟರಿಗೆ ಢಿಕ್ಕಿ ಹೊಡೆದಿದ್ದಾನೆ. ಪರಿಣಾಮ ಹಿಂಬದಿ ಸವಾರೆಯಾಗಿದ್ದ ವಸಂತಿ ಫ್ಲೈಓವರಿನಿಂದ ಕೆಳಗೆ ರಸ್ತೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಗುರಿ ಸಂಚಾರಿ ಠಾಣಾ ಪೊಲೀಸರು ಕಾರು ಚಾಲಕ ಶಮಿತ್ ನನ್ನು ವಿಚಾರಣೆ ನಡೆಸುತ್ತಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು