ಪುತ್ತೂರು: ‘ನಗರಸಭೆ ಆಡಳಿತದ ಎರಡು ವರ್ಷದ ಅವಧಿಯಲ್ಲಿ ₹180 ಕೋಟಿ ಮೊತ್ತದ ಯೋಜನೆಗಳು ಕಾರ್ಯಗತಗೊಂಡಿವೆ. ಹಾರಾಡಿಯಿಂದ ರೈಲ್ವೆ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಕಾಂಕ್ರಿಟೀಕರಣ ಕಾರ್ಯ ಈಗ ನಡೆದಿದೆ’ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.
ಪುತ್ತೂರು-ಉಪ್ಪಿನಂಗಡಿ ರಸ್ತೆಯ ಹಾರಾಡಿಯಿಂದ ರೈಲ್ವೆ ನಿಲ್ದಾಣ ಸಂಪರ್ಕಿಸುವ ರಸ್ತೆಯ ₹ 1.56 ಕೋಟಿ ವೆಚ್ಚದ ಕಾಂಕ್ರಿಟೀಕರಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಸಂಜೀವ ಮಠಂದೂರು, ‘ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ₹1075 ಕೋಟಿ ಮೊತ್ತದ ಕಾಮಗಾರಿಗಳು ಆಗುತ್ತಿವೆ. ಹೀಗಿದ್ದರೂ ಕೆಲವರು ‘ಸಂಜೀವ ಮಠಂದೂರು ಬಿಲ್ಡಪ್ ಕೊಡುತ್ತಿದ್ದಾರೆ’ ಎಂದು ಟೀಕಿಸುತ್ತಾರೆ’ ಎಂದು ಹೇಳಿದರು.
ಪುತ್ತೂರು ನಗರಸಭೆಯ ಅಧ್ಯಕ್ಷ ಕೆ.ಜೀವಂಧರ್ ಜೈನ್ ಮಾತನಾಡಿ, ‘2 ವರ್ಷಗಳಲ್ಲಿ ₹180 ಕೋಟಿ ಮೊತ್ತದ ಯೋಜನೆಗಳು ಕಾರ್ಯಗತಗೊಂಡಿವೆ. ನಗರಸಭೆ ವ್ಯಾಪ್ತಿಯಲ್ಲಿ ₹70 ಲಕ್ಷ ವೆಚ್ಚದಲ್ಲಿ 11 ಪಾರ್ಕ್‌ಗಳನ್ನು ನಿರ್ಮಿಸಲಾಗಿದೆ’ ಎಂದರು.
ನಗರಸಭೆ ಉಪಾಧ್ಯಕ್ಷೆ ವಿದ್ಯಾ ಆರ್. ಗೌರಿ, ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ನಗರಸಭೆಯ ಸದಸ್ಯ ಪದ್ಮನಾಭ ನಾಯ್ಕ್ ಪಡೀಲ್, ರಾಜ್ಯ ಮೀನುಗಾರಿಕಾ ನಿಗಮದ ಅಧ್ಯಕ್ಷ ಎ.ವಿ. ತೀರ್ತಾರಾಮ ಇದ್ದರು. ಪೌರಾಯುಕ್ತ ಮಧು ಎಸ್. ಮನೋಹರ್ ಸ್ವಾಗತಿಸಿದರು. ನಗರಸಭೆಯ ಸದಸ್ಯ ಪಿ.ಜಿ. ಜಗನ್ನಿವಾಸ ರಾವ್ ವಂದಿಸಿದರು. ಶಿಕ್ಷಕ ಬಾಲಕೃಷ್ಣ ಕಾರ್ಯಕ್ರಮ ನಿರೂಪಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.