ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಂಗ್ರಕೂಳೂರು: ಬಿರುಕು ಬಿಟ್ಟ ರಸ್ತೆ

Published 2 ಜುಲೈ 2024, 11:39 IST
Last Updated 2 ಜುಲೈ 2024, 11:39 IST
ಅಕ್ಷರ ಗಾತ್ರ

ಮಂಗಳೂರು: ನಗರದ ಬಂಗ್ರಕೂಳೂರಿನಲ್ಲಿ ಮಳೆ ನೀರು ಹರಿಯುವ ಹಳ್ಳದ ಪಕ್ಕದ ರಸ್ತೆಯಲ್ಲಿ ಸುಮಾರು 50 ಮೀ ಉದ್ದಕ್ಕೆ ಬಿರುಕುಗಳು ಕಾಣಿಸಿಕೊಂಡಿದ್ದು, ರಸ್ತೆ ಕುಸಿಯುವ ಆತಂಕ ಎದುರಾಗಿದೆ.

ವಾರದ ಹಿಂದೆಯೇ ರಸ್ತೆಯಲ್ಲಿ ಸಣ್ಣ ಪ್ರಮಾಣದ ಬಿರುಕುಗಳು ಕಾಣಿಸಿಕೊಂಡಿದ್ದವು. ಸ್ಥಳೀಯ ಪಾಲಿಕೆ‌ ಸದಸ್ಯ ಕಿರಣ್ ಕುಮಾರ್ ಅವರ ಸೂಚನೆ ಮೇರೆಗೆ, ಮುನ್ನೆಚ್ಚರಿಕಾ ಕ್ರಮವಾಗಿ ರಸ್ತೆ ಪಕ್ಕದ ವಿದ್ಯುತ್ ಕಂಬಗಳನ್ನು ತೆರವುಗೊಳಿಸಲಾಗಿದೆ.

ಬಂಗ್ರಕೂಳೂರು ಪ್ರದೇಶದ ಹತ್ತಕ್ಕೂ ಹೆಚ್ಚು ಮನೆಗಳಿಗೆ ಸಂಪರ್ಕ‌ ರಸ್ತೆ ಇದಾಗಿದೆ.‌ ರಸ್ತೆ ಪೂರ್ತಿ ಕುಸಿದರೆ‌ ಈ ಮನೆಗಳಿಗೆ ರಸ್ತೆ ಸಂಪರ್ಕ ಇಲ್ಲದಂತಾಗಲಿದೆ ಎಂದು ಸ್ಥಳೀಯರು ಕಳವಳ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT