ಉಳ್ಳಾಲ: ಕುರ್ನಾಡು ಗ್ರಾಮದ ಕಿನ್ಯಾಜೆಯಿಂದ ಕುರ್ನಾಡು ಬೆಟ್ಟು ಸಂಪರ್ಕಿಸುವ ಸಾರ್ವಜನಿಕ ರಸ್ತೆಯ ಅತಿಕ್ರಮಣ ನಡೆಯುತ್ತಿದ್ದು, ಇದರಿಂದ ಸುಮಾರು 12 ಕುಟುಂಬಗಳ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ರಸ್ತೆಗೆ ಅಡ್ಡಲಾಗಿ ಹಾಕಿರುವ ಅಡಿಕೆ ಮರದ ತುಂಡುಗಳು ಹಾಗೂ ಕಲ್ಲಿನ ರಾಶಿಗಳನ್ನು ಕೂಡಲೇ ತೆರವುಗೊಳಿಸಿ ಸಾರ್ವಜನಿಕ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು. ಇಲ್ಲದಿದ್ದಲ್ಲಿ ರಸ್ತೆ ವಂಚಿತರು ಹಾಗೂ ಊರಿನ ಪ್ರಮುಖರು ಸಂಘಟನೆಯ ಮುಂದಾಳ್ವತದಲ್ಲಿ ಫೆ.9ರoದು ಪ್ರತಿಭಟನೆ ನಡೆಸುವರು ಎಂದು ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ ಸ್ಥಾಪಕಾಧ್ಯಕ್ಷ ಬಿ.ಕೆ.ಸೇಸಪ್ಪ ಬೆದ್ರಕಾಡು ಎಚ್ಚರಿಕೆ ನೀಡಿದ್ದಾರೆ.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಗ್ಗೆ ಪಂಚಾಯಿತಿ ಸೇರಿದಂತೆ ಸಂಬಂಧಿಸಿದ ಎಲ್ಲ ಇಲಾಖೆಗಳಿಗೆ ಮನವಿ ಸಲ್ಲಿಸಿದ್ದರೂ ಕ್ರಮ ಕೈಗೊಂಡಿಲ್ಲ ಎಂದರು.

ರಸ್ತೆ ವಂಚಿತರಾದ ಚಂದ್ರಶೇಖರ್ ಆಚಾರ್ಯ ಮಾತನಾಡಿದರು.

ಜಿಲ್ಲಾ ಘಟಕದ ಅಧ್ಯಕ್ಷ ಪ್ರಸಾದ್ ಬೊಳ್ಯಾರು, ತಾಲ್ಲೂಕು ಘಟಕದ ಸಂಚಾಲಕ ಜಗದೀಶ್ ಮಂಜನಾಡಿ, ಸ್ಥಳೀಯರಾದನ ಭವಾನಿ, ರತ್ನ, ನಾರಾಯಣ ಆಚಾರ್ಯ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.