ಶನಿವಾರ, ಮೇ 21, 2022
23 °C

ನಟ ಯಶ್ ಧರ್ಮಸ್ಥಳಕ್ಕೆ ಭೇಟಿ:  ಕೆ.ಜಿ.ಎಫ್ 2 ಯಶಸ್ಸಿಗಾಗಿ ಪ್ರಾರ್ಥನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಜಿರೆ: ಚಿತ್ರನಟ ಯಶ್ ಭಾನುವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಬಳಿಕ ಅವರು ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.

ಅಲ್ಲಿಂದ ‘ಮಣ್ಣಿನ ಹರಕೆ’ಯ ಕ್ಷೇತ್ರವೆಂದೇ ಪ್ರಸಿದ್ಧಿಯಾದ ಸುರ್ಯ ದೇವಸ್ಥಾನಕ್ಕೂ ಭೇಟಿ ನೀಡಿ, ದೇವರ ದರ್ಶನ ಮಾಡಿ ಸೇವೆ ಸಲ್ಲಿಸಿದರು.

ಕೆ.ಜಿ.ಎಫ್.2 ಚಿತ್ರ ಇದೇ 14ರಂದು ಬಿಡುಗಡೆಯಾಗಲಿದ್ದು, ಚಿತ್ರದ ಯಶಸ್ಸಿಗಾಗಿ ಪ್ರಾರ್ಥನೆ ಸಲ್ಲಿಸಲು ವಿವಿಧ ಕ್ಷೇತ್ರಗಳಿಗೆ ಭೇಟಿ ನೀಡುತ್ತಿದ್ದೇವೆ ಎಂದು ಯಶ್‌ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು