ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್‌ಸಿಆರ್ ಶಿಕ್ಷಣ ಸಂಸ್ಥೆ ಸಂಸ್ಥಾಪಕ ರೋಹಿನಾಥ್ ಪಾದೆ ನಿಧನ

Last Updated 12 ಏಪ್ರಿಲ್ 2022, 5:43 IST
ಅಕ್ಷರ ಗಾತ್ರ

ಬಂಟ್ವಾಳ: ಇಲ್ಲಿನ ತೆಂಕಕಜೆಕಾರು ಪಾದೆಗುತ್ತು ಹೊಸಮನೆ ನಿವಾಸಿ, ಕಕ್ಯಪದವು ಎಲ್‌ಸಿಆರ್ ಶಿಕ್ಷಣ ಸಂಸ್ಥೆ ಸಂಸ್ಥಾಪಕ, ರೋಟರಿ ಕ್ಲಬ್ ಮಾಜಿ ಜಿಲ್ಲಾ ಗವರ್ನರ್ ರೋಹಿನಾಥ್ ಪಾದೆ (62) ಅನಾರೋಗ್ಯದಿಂದ ಸೋಮವಾರ ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ.

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ವಿಜ್ಞಾನ ಪದವಿ ಗಳಿಸಿ, ಪ್ರೀಮಿಯರ್ ಸೆಕ್ಯೂರಿಟಿ ಸರ್ವಿಸಸ್ ಸಂಸ್ಥೆ ಮುನ್ನಡೆಸುತ್ತಿದ್ದ ಅವರು ಬಳಿಕ ತನ್ನ ತಂದೆ ಶಿಕ್ಷಕ ದಿವಂಗತ ಲಿಂಗಪ್ಪ ಮಾಸ್ಟರ್ ಹೆಸರಿನಲ್ಲಿ ಎಲ್‌ಸಿಆರ್ ಶಿಕ್ಷಣ ಸಂಸ್ಥೆ ಆರಂಭಿಸಿದರು. ಅವರು ಕಬಡ್ಡಿ ಆಟಗಾರರಾಗಿ ಗುರುತಿಸಿಕೊಂಡಿದ್ದರು.

ಕಕ್ಯಪದವು ಬ್ರಹ್ಮ ಬೈದರ್ಕಳ ಗರಡಿ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರಾಗಿ, ತೆಂಕಕಜೆಕಾರು ಕರ್ಲ ಕೃಷ್ಣ ದೇವಸ್ಥಾನ ಜೀರ್ಣೋದ್ಧಾರ ಸಮಿತಿ, ಕುರುವರಗೋಳಿ ಮಹಮ್ಮಾಯಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ, ಕಜೆಕಾರು ಮಹದೇವದೇವೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿದ್ದರು. ಮಡವು ಬಾಲಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ನಿರ್ದೇಶಕರಾಗಿ, ಪಾದೆಗುತ್ತು ಮನೆತನದ ದೈವಸ್ಥಾನಗಳ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT