ಉಜಿರೆ: ಇಲ್ಲಿನ ಹಳೆಪೇಟೆಯಲ್ಲಿರುವ ಸರ್ಕಾರಿ ಶಾಲೆ ಕಟ್ಟಡದ ಚಾವಣಿ ಗುರುವಾರ ಕುಸಿದಿದೆ.
44 ವರ್ಷಗಳ ಹಿಂದೆ ನಿರ್ಮಿಸಿದ್ದ ಶಾಲೆಯ ಹಳೆಯ ಹೆಂಚಿನ ಚಾವಣಿಯ ಸಭಾಭವನ ಶಿಥಿಲವಾಗಿದ್ದು, ಈ ಬಗ್ಗೆ ಗಮನ ಹರಿಸಿರಲಿಲ್ಲ. ಘಟನೆಯಲ್ಲಿ ಹೆಚ್ಚಿನ ಅವಘಡ ಉಂಟಾಗಿಲ್ಲ.
ಬೆಳ್ತಂಗಡಿ ರೋಟರಿ ಕ್ಲಬ್‌ನವರು ಚಾವಣಿ ದುರಸ್ತಿ ಮಾಡಿಕೊಡುವ ಭರವಸೆ ನೀಡಿದ್ದಾರೆ ಎಂದು ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ ತಿಳಿಸಿದ್ದಾರೆ.
24ರಿಂದ ಭಜನಾ ತರಬೇತಿ ಕಮ್ಮಟ
ಉಜಿರೆ: ಧರ್ಮಸ್ಥಳದಲ್ಲಿ ಸೆ.28ರಿಂದ ಅ.4ರ ವರೆಗೆ ಭಜನಾ ತರಬೇತಿ ಕಮ್ಮಟ ಆಯೋಜಿಸಲಾಗಿದೆ.
ಭಜನಾಸಾಹಿತ್ಯ ಶ್ರುತಿ, ಲಯ, ತಾಳ ಮತ್ತು ನೃತ್ಯದ ಬಗ್ಗೆ ತಜ್ಞರಿಂದ ಮಾಹಿತಿ, ಮಾರ್ಗದರ್ಶನ ನೀಡಲಾಗುವುದು. ಯೋಗ, ಆರೋಗ್ಯ, ನೈತಿಕ ಮೌಲ್ಯಗಳ ಬಗ್ಗೆಯೂ ಮಾರ್ಗದರ್ಶನ ನೀಡಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.
ಸಮಾಲೋಚನಾ ಸಭೆ 11ರಂದು
ಉಜಿರೆ: ಮುಂದಿನ ವರ್ಷ ವೇಣೂರಿನಲ್ಲಿ ನಡೆಯಲಿರುವ ಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕದ ಪೂರ್ವಸಿದ್ಧತೆಗಳ ಬಗ್ಗೆ ಸಮಾಲೋಚನಾ ಸಭೆ ಸೆ.11ರಂದು ಸಂಜೆ 4 ಗಂಟೆಗೆ ವೇಣೂರಿನ ಬಾಹುಬಲಿ ಸಭಾಭವನದಲ್ಲಿ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದು ದಿಗಂಬರ ಜೈನತೀರ್ಥಕ್ಷತ್ರ ಸಮಿತಿ ಕಾರ್ಯದರ್ಶಿ ಪ್ರವೀಣ ಕುಮಾರ್ ಇಂದ್ರ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.