ಮಂಗಳೂರು: ಬಜಪೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ರೌಡಿಶೀಟರ್, ಹಿಂದುತ್ವವಾದಿ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಮತ್ತೊಬ್ಬ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಈ ಪ್ರಕರಣದಲ್ಲಿ ಒಟ್ಟು 12 ಆರೋಪಿಗಳ ಬಂಧನವಾದಂತಾಗಿದೆ.

‘ಬಜಪೆ ಶಾಂತಿಗುಡ್ಡೆಯ ಬದ್ರಿಯಾ ಜುಮ್ಮಾ ಮಸೀದಿ ಬಳಿಯ ನಿವಾಸಿ ಅಬ್ದುಲ್ ರಜಾಕ್ (59) ಬಂಧಿತ ಆರೋಪಿ. ಆತ ಪ್ರಸ್ತುತ ಕೆಂಜಾರಿನ ಅಪಾರ್ಟ್ಮೆಂಟ್ ಸಮುಚ್ಚಯದಲ್ಲಿ ವಾಸವಾಗಿದ್ದ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಅಬ್ದುಲ್ ರಜಾಕ್ನ ಮಗ ಮೊಹಮ್ಮದ್ ಮುಜಾಂಮಿಲ್ ಮತ್ತು ಅಳಿಯ ನೌಷದ್ ವಾಮಂಜೂರು ಅಲಿಯಾಸ್ ಚೊಟ್ಟೆ ನೌಷದ್ ಕೂಡಾ ಆರೋಪಿಗಳಾಗಿದ್ದಾರೆ. ಅವರು ಇತರ ಆರೋಪಿಗಳ ಜೊತೆ ಸೇರಿ ಕೊಲೆಗೆ ಸಂಚು ರೂಪಿಸಲು ಮತ್ತು ಇತರ ಆರೋಪಿಗಳು ತಲೆ ಮರೆಸಿಕೊಳ್ಳಲು ಆತ ಸಹಕರಿಸಿದ್ದ’ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಈ ಹತ್ಯೆ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ. ಈ ಪ್ರಕರಣದಲ್ಲಿ ಭಾಗಿಯಾದ ಇತರ ಆರೋಪಿಗಳ ಪತ್ತೆಕಾರ್ಯ ಮುಂದುವರಿದಿದೆ ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.