ಬುಧವಾರ, ಮಾರ್ಚ್ 22, 2023
24 °C

ಶಕ್ತಿನಗರ: ಎಟಿಎಂನಿಂದ 1 ಲಕ್ಷ ಪಡೆದು ವಂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಶಕ್ತಿನಗರದಲ್ಲಿರುವ ಕೆನರಾ ಬ್ಯಾಂಕ್ ಶಾಖೆಯ ಎಟಿಎಂನಿಂದ ₹ 1,09,000 ನಗದನ್ನು ಅಕ್ರಮವಾಗಿ ಹಿಂಪಡೆದು ವಂಚಿಸಿದ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

‘ಎಟಿಎಂಗೆ 2022 ರ ಅಕ್ಟೋಬರ್ ತಿಂಗಳಲ್ಲಿ ಬಂದಿದ್ದ ವಂಚಕರು ಬೇರೆ ಬ್ಯಾಂಕಿನ ಎ.ಟಿ.ಎಂ ಕಾರ್ಡ್ ಬಳಸಿ, ಯಂತ್ರವನ್ನು ಟ್ಯಾಂಪರಿಂಗ್ ಮಾಡಿದ್ದಾರೆ. ನೆಟ್‌ವರ್ಕ್ ಮತ್ತು ಪವರ್ ಕೇಬಲ್ ಕತ್ತರಿಸಿ ಯಂತ್ರವನ್ನು ಸೂಪರ್‌ವೈಸರ್ ಮೋಡ್ ತಂದು ₹ 1,09,000 ನಗದು ಪಡೆದು ವಂಚಿಸಿದ್ದಾರೆ ಎಂದು ಬ್ಯಾಂಕಿನ ಶಾಖಾ ವ್ಯವಸ್ಥಾಪಕ ಒಬಿಲಿ ರಿಯಾಜ್‌ ದೂರಿನಲ್ಲಿ ತಿಳಿಸಿದ್ದಾರೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು