ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘100 ಪೊಲೀಸ್ ಠಾಣೆ: ₹ 200 ಕೋಟಿ ವೆಚ್ಚ’: ಸಚಿವ ಆರಗ ಜ್ಞಾನೇಂದ್ರ

Last Updated 9 ನವೆಂಬರ್ 2021, 4:56 IST
ಅಕ್ಷರ ಗಾತ್ರ

ಸುಬ್ರಹ್ಮಣ್ಯ: ರಾಜ್ಯದಲ್ಲಿ ಪೊಲೀಸ್ ಇಲಾಖೆ ಬಲವರ್ಧನೆಗೆ ಸರ್ಕಾರ ಹೆಚ್ಚಿನ ಮಹತ್ವ ನೀಡುತ್ತಿದೆ. ಸುಮಾರು 100 ಪೊಲೀಸ್ ಠಾಣೆಗಳ ಹೊಸ ಕಟ್ಟಡ ಕಾಮಗಾರಿಯನ್ನು ₹ 200 ಕೋಟಿ ವೆಚ್ಚದಲ್ಲಿ ನಡೆಸಲಾಗುವುದು. ಸುಬ್ರಹ್ಮಣ್ಯ ಪೊಲೀಸ್ ಠಾಣೆ ಕಟ್ಟಡಕ್ಕೆ ₹ 1 ಕೋಟಿ ಅನುದಾನ ನಿಗದಿಪಡಿಸಲಾಗಿದೆ. ಸದ್ಯದಲ್ಲೇ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಸೋಮವಾರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪೊಲೀಸ್ ಇಲಾಖೆಯಲ್ಲಿ ವಾರ್ಷಿಕ 4 ಸಾವಿರ ಹುದ್ದೆಗಳ ನೇಮಕಾತಿ ನಡೆಸಲಾಗುತ್ತಿದೆ. ಈಗ ಕೇವಲ 12 ಸಾವಿರ ಹುದ್ದೆಗಳು ಖಾಲಿ ಇವೆ’ ಎಂದರು.

‘ವೀರ ಸಾವರ್ಕರ್ ಸ್ವಾತಂತ್ರ್ಯಯೋಧ. ಅಂತಹವರ ಸ್ಮಾರಕ ಕಟ್ಟುವುದನ್ನು ವಿರೋಧಿಸುವುದು, ಈ ದೇಶದ ವ್ಯವಸ್ಥೆಯನ್ನೇ ವಿರೋಧಿಸಿದಂತೆ. ಹೊಸ ಪೀಳಿಗೆಗೆ ಸಾವರ್ಕರ್ ಅಂಥವರ ಬದುಕು ತಿಳಿಸುವ ಕೆಲಸ ಆಗುತ್ತಿದೆ. ಕಾಂಗ್ರೆಸ್ ಇದನ್ನು ವಿರೋಧಿಸುತ್ತಿದೆ ಎಂದಾದರೆ ಜನ ಅವರನ್ನು ವಿರೋಧಿಸುತ್ತಾರೆ’ ಎಂದರು.

ದೇಗುಲಕ್ಕೆ ಭೇಟಿ ನೀಡಿದ ವೇಳೆ, ಕಾರ್ಯ ನಿರ್ವಹಣಾಧಿಕಾರಿ ಡಾ.ನಿಂಗಯ್ಯ, ಸಹಾಯಕ ಕಾರ್ಯನಿರ್ವಹಣಾ ಅಧಿಕಾರಿ ಪುಷ್ಪಲತಾ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಸದಸ್ಯರಾದ ಶ್ರೀವತ್ಸ, ಪ್ರಸನ್ನ ದರ್ಬೆ, ಪಿ.ಜಿ.ಎಸ್.ಎನ್. ಪ್ರಸಾದ್, ಶೋಭಾ ಗಿರಿಧರ್, ವನಜಾ ವಿ.ಭಟ್, ಮಾಸ್ಟರ್ ಪ್ಲಾನ್ ಸದಸ್ಯ ಮನೋಜ್, ಪ್ರಮುಖರಾದ ಶ್ರೀಕುಮಾರ್ ಬಿಲದ್ವಾರ, ದಿನೇಶ್ ಸಂಪ್ಯಾಡಿ, ವೆಂಕಟ್ ವಲಲಂಬೆ, ಪ್ರಸಾದ್ ಕೆ.ರೈ ಇದ್ದರು.

ಶ್ರೀಗಳ ಆಶೀರ್ವಾದ: ಸಂಪುಟ ನರಸಿಂಹ ಸ್ವಾಮಿ ಮಠಕ್ಕೆ ಭೇಟಿ ನೀಡಿದ ಸಚಿವ ಆರಗ ಜ್ಞಾನೇಂದ್ರ, ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಾದ ಪಡೆದರು. ಶ್ರೀಗಳು ಸಚಿವರಿಗೆ ಶಾಲು ಹೊದೆಸಿ, ಪ್ರಸಾದ ನೀಡಿ ಶುಭ ಹಾರೈಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT