ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆಗೆಟಿವ್ ವರದಿ ತಂದರಷ್ಟೇ ಪ್ರವೇಶ: ತಲಪಾಡಿ ಗಡಿಯಲ್ಲಿ ಪರೀಕ್ಷಾ ಕೇಂದ್ರ ಬಂದ್

ಗಡಿಯಲ್ಲಿ ತಪಾಸಣೆ ಮತ್ತಷ್ಟು ಬಿಗಿ
Last Updated 2 ಆಗಸ್ಟ್ 2021, 8:04 IST
ಅಕ್ಷರ ಗಾತ್ರ

ಮಂಗಳೂರು: ಇಂದಿನಿಂದ ಕೇರಳ–ಕರ್ನಾಟಕ ಗಡಿಯಲ್ಲಿ ಮತ್ತಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ರಾಜ್ಯ ಸರ್ಕಾರದ ಸೂಚನೆ ಬೆನ್ನಲ್ಲೇ ತಲಪಾಡಿ ಗಡಿಯನ್ನು ಜಿಲ್ಲಾಡಳಿತ ಸಂಪೂರ್ಣ ಬಂದ್ ಮಾಡಿದೆ.

ಗಡಿ ಪ್ರದೇಶಗಳಿಗೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯಿಂದ ಕಟ್ಟು ನಿಟ್ಟಿನ ಕ್ರಮ ಆರಂಭಿಸಿವೆ.

ಗಡಿ ಭಾಗದ ತಲಪಾಡಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ‌.ವಿ.ರಾಜೇಂದ್ರ ಮತ್ತು ಮಂಗಳೂರು ಪೊಲೀಸ್ ಕಮಿಷನರ್ ಎನ್‌.ಶಶಿಕುಮಾರ್ ಭೇಟಿ ನೀಡಿ, ತಪಾಸಣೆ ನಡೆಸಿದರು.

ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಇಲ್ಲದವರನ್ನು ವಾಪಸ್ ಕಳುಹಿಸಲಾಗುತ್ತಿದೆ. ತಲಪಾಡಿ ಗಡಿ ಚೆಕ್ ಪೋಸ್ಟ್‌ನಲ್ಲಿ ವ್ಯವಸ್ಥೆ ಮಾಡಲಾಗಿದ್ದ ಆರ್‌ಟಿಪಿಸಿಆರ್ ಪರೀಕ್ಷಾ ಕೇಂದ್ರವನ್ನು ಬಂದ್ ಮಾಡಲಾಗಿದೆ. ಕೇರಳದಿಂದಲೇ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ತರಲು ಸೂಚನೆ ನೀಡಲಾಗಿದೆ. ಸ್ವಯಂ ಪ್ರೇರಿತ ನೆಗೆಟಿವ್ ವರದಿ ತಂದರಷ್ಟೇ ಜಿಲ್ಲೆಗೆ ಪ್ರವೇಶಿಸಲು ಅವಕಾಶ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

<br /><em><strong>ಕೇರಳ ಹಾಗೂ ಮಹಾರಾಷ್ಟ್ರದಿಂದ ಬಂದ ಪ್ರಯಾಣಿಕರಿಗೆ ಮಂಗಳೂರಿನ ಕೇಂದ್ರ ರೈಲು ನಿಲ್ದಾಣದಲ್ಲಿ ಆರ್‌ಟಿಪಿಸಿಆರ್ ಪರೀಕ್ಷೆಗೆ ಗಂಟಲು ದ್ರವ ಮಾದರಿ ಸಂಗ್ರಹಿಸಲಾಯಿತು. </strong></em>

ಕೇರಳ ಹಾಗೂ ಮಹಾರಾಷ್ಟ್ರದಿಂದ ಬಂದ ಪ್ರಯಾಣಿಕರಿಗೆ ಮಂಗಳೂರಿನ ಕೇಂದ್ರ ರೈಲು ನಿಲ್ದಾಣದಲ್ಲಿ ಆರ್‌ಟಿಪಿಸಿಆರ್ ಪರೀಕ್ಷೆಗೆ ಗಂಟಲು ದ್ರವ ಮಾದರಿ ಸಂಗ್ರಹಿಸಲಾಯಿತು.

ಗಡಿಭಾಗ ತಲಪಾಡಿಯಲ್ಲಿ ಕೋವಿಡ್ ಟೆಸ್ಟ್ ಸ್ಥಗಿತಗೊಳಿಸಿದ ದ‌.ಕ ಜಿಲ್ಲಾಡಳಿತ, ಕೇರಳದ ಜನರ ಅಸಮಾಧಾನ:

ಗಡಿಭಾಗದ ಚೆಕ್ ಪೋಸ್ಟ್ ನಲ್ಲಿ ಪರೀಕ್ಷಾ ಕೇಂದ್ರ ಬಂದ್ ಮಾಡಿದ್ದರಿಂದ, ತಪಾಸಣೆಗಾಗಿ ಗಡಿಯಲ್ಲಿ ಸಾಲುಗಟ್ಟಿ ನಿಂತಿದ್ದ ಜನರು ಅಸಮಾಧಾನ ವ್ಯಕ್ತಪಡಿಸಿದರು. ಏಕಾಏಕಿ ಟೆಸ್ಟಿಂಗ್ ಸ್ಥಗಿತಗೊಳಿಸಿದ್ದು ಸರಿಯಲ್ಲ ಅಂತ ಕೇರಳಿದವರು ಆಕ್ರೋಶ ವ್ಯಕ್ತಪಡಿಸಿದರು. ಲಸಿಕೆ ಎರಡು ಡೋಸ್ ಪಡೆದವರಿಗೆ ಮಂಗಳೂರು ಪ್ರವೇಶಕ್ಕೆ ಅನುಮತಿ ಕೊಡಿ ಎಂದು ಒತ್ತಾಯಿಸಿದರು.

ಏಕಾಏಕಿ ಟೆಸ್ಟಿಂಗ್ ಸ್ಥಗಿತದಿಂದ ಗಡಿಯಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT