ಗುರುವಾರ , ಜನವರಿ 20, 2022
15 °C
ಮೀನುಗಾರಿಕಾ ಸಚಿವ ಎಸ್. ಅಂಗಾರ ಪ್ರತಿಕ್ರಿಯೆ

ಆರ್‌ಎಸ್‌ಎಸ್‌ ಬಗ್ಗೆ ಸತ್ಯಾಂಶ ಗೊತ್ತಿಲ್ಲದವರಿಂದ ಟೀಕೆ: ಎಸ್. ಅಂಗಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಆರ್‌ಎಸ್‌ಎಸ್‌ ಬಗ್ಗೆ ಸತ್ಯಾಂಶ ಗೊತ್ತಿಲ್ಲದವರು ಟೀಕೆ ಮಾಡುತ್ತಾರೆ. ಇದರಿಂದ ಆರ್‌ಎಸ್‌ಎಸ್‌ಗೆ ಏನೂ ಹಾನಿ ಇಲ್ಲ ಎಂದು ಮೀನುಗಾರಿಕಾ ಸಚಿವ ಎಸ್. ಅಂಗಾರ ಹೇಳಿದರು.

ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಆರ್‌ಎಸ್‌ಎಸ್‌ ಬಗ್ಗೆ ಟೀಕಿಸಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಬಗ್ಗೆ ಜನರಿಗೆ ಗೊತ್ತಿದೆ. ಅಪಪ್ರಚಾರದಿಂದ ಮತ ಗಳಿಸಲು ಸಾಧ್ಯವಿಲ್ಲ ಎಂಬುದನ್ನು ಅವರು ತಿಳಿದುಕೊಳ್ಳಬೇಕು’ ಎಂದರು.

‘ನಾನು ಆರನೇ ತರಗತಿಯಲ್ಲಿ ಇರುವಾಗಿನಿಂದ ಆರ್‌ಎಸ್‌ಎಸ್ ಬಗ್ಗೆ ತಿಳಿದುಕೊಂಡಿದ್ದೇನೆ. ಈ ಸಂಘಟನೆಯಿಂದ ಎಲ್ಲ ವಿಷಯಗಳನ್ನೂ ತಿಳಿದುಕೊಳ್ಳಬಹುದು. ಇದನ್ನು ಕುಮಾರಸ್ವಾಮಿ ಮೊದಲು ತಿಳಿದುಕೊಳ್ಳಲಿ. ರಾಜಕೀಯದಲ್ಲಿ ಟೀಕೆ ಸಹಜ. ಆದರೆ, ಚುನಾವಣೆಯಲ್ಲಿ ಮತ ಹಾಕುವವರು ಜನರು. ಟೀಕೆ ಹೇಗಿರಬೇಕು ಎಂಬುದನ್ನು ಜನಪ್ರತಿನಿಧಿಗಳು ತಿಳಿದುಕೊಳ್ಳಬೇಕು. ಚುನಾವಣೆ ನಡೆಯುವ ಕ್ಷೇತ್ರ ಮಾತ್ರವಲ್ಲ, ಎಲ್ಲ ಕಡೆಗಳಲ್ಲೂ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿ ಆಗಿದೆ’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು