ಮಂಗಳವಾರ, ಸೆಪ್ಟೆಂಬರ್ 28, 2021
24 °C

ಮಂಗಳೂರು: ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿ ಎಂದು ಉಲ್ಲೇಖಿಸಿದ ಸಚಿವ ಅಂಗಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವವನ್ನು ಸರಳವಾಗಿ ಆಚರಿಸಲಾಯಿತು.
ಮೀನುಗಾರಿಕೆ ಸಚಿವ ಎಸ್. ಅಂಗಾರ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು.

ಭಾಷಣ ನಡುವೆ ಅವರು ಕರ್ನಾಟಕದ ಮುಖ್ಯಮಂತ್ರಿ ಹೆಸರನ್ನು ಉಲ್ಲೇಖಿಸುವಾಗ ಬಸವರಾಜ ಬೊಮ್ಮಾಯಿ ಬದಲಾಗಿ ‘ಎಸ್.ಆರ್. ಬೊಮ್ಮಾಯಿ’ ನೇತೃತ್ವದಲ್ಲಿ ನಮ್ಮ ಸರ್ಕಾರ ಅನೇಕ ಅಭಿವೃದ್ಧಿ ಕಾರ್ಯದ ಜತೆಗೆ ಆರ್ಥಿಕ- ಸಾಮಾಜಿಕ ಚಟುವಟಿಕೆಗೆ ಚೈತನ್ಯ ತುಂಬಿದೆ ಎಂದು ಹೇಳಿದರು.

ಪ್ರೇಕ್ಷಕರ ಸಾಲಿನಲ್ಲಿ ಕುಳಿತಿದ್ದ ಎಲ್ಲರೂ ಅವರು ಮುಖ್ಯಮಂತ್ರಿ ಹೆಸರು ತಪ್ಪಾಗಿ ಉಲ್ಲೇಖಿಸಿದ್ದನ್ನು ಗಮನಿಸಿದರು.

ಸಚಿವರಿಗೆ ನೀಡಿದ್ದ ಸಿದ್ಧ‌ ಭಾಷಣದ ಪ್ರತಿಯಲ್ಲಿ ಈ ಪ್ರಮಾದವಾಗಿತ್ತು. ಸಚಿವರು ಅದನ್ನೇ ಓದಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು