ಬೆಳ್ತಂಗಡಿ: ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ಆಂಬುಲೆನ್ಸ್ನಲ್ಲಿ ಕರೆದೊಯ್ಯುವ ವೇಳೆ ಮಹಿಳೆಯೊಬ್ಬರಿಗೆ ಹೆರಿಗೆ ನೋವು ತೀವ್ರಗೊಂಡಿದ್ದು, ಶುಶ್ರೂಷಕಿಯರಿಬ್ಬರು ಸೇರಿ ಆಕೆಗೆ ದಾರಿ ಮಧ್ಯೆಯೇ ಆ ವಾಹನದಲ್ಲೇ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ.

ಬಾಣಂತಿ ಹಾಗೂ ಮಗು ಆರೋಗ್ಯವಾಗಿದ್ದಾರೆ ಎಂದು ಮಂಗಳೂರಿನ ಸರ್ಕಾರಿ ಲೇಡಿಗೋಷನ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಸುದೆಮುಗೇರುವಿನ ಲೀಲಾವತಿ ಅವರು ಬೆಳ್ತಂಗಡಿ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಸೋಮವಾರ ಮುಂಜಾನೆ ಹೆರಿಗೆಗೆಂದು ಬಂದಿದ್ದರು. ಅವರಿಗೆ ಇದು ಎರಡನೇ ಹೆರಿಗೆಯಾಗಿದ್ದು, ಮೊದಲ ಹೆರಿಗೆಯಲ್ಲಿ ಸಿಜೇರಿಯನ್ ಮೂಲಕ ಮಗುವನ್ನು ಹೊರತೆಗೆಯಲಾಗಿತ್ತು. ಹಾಗಾಗಿ ಮಂಗಳೂರಿನ ಸರ್ಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲೇ ಹೆರಿಗೆ ಆಗಬೇಕೆಂಬ ಅಭಿಲಾಷೆ ವ್ಯಕ್ತಪಡಿಸಿದ್ದರು. ಇಬ್ಬರು ಶುಶ್ರೂಶಕಿಯರ ಜತೆಗೆ ಬೆಳ್ತಂಗಡಿ ತಾಲ್ಲೂಕು ಸರ್ಕಾರಿ ಆಸ್ಪತ್ರೆಯ ತುರ್ತು ವಾಹನದಲ್ಲಿ ಅವರನ್ನು ಅಲ್ಲಿನ ವೈದ್ಯರು ಮಂಗಳೂರಿಗೆ ಕಳುಹಿಸಿದ್ದರು.

ಫರಂಗಿಪೇಟೆ ಸಮೀಪಿಸುತ್ತಿದ್ದಂತೆ ಮಹಿಳೆಗೆ ಹೆರಿಗೆ ನೋವು ತೀವ್ರಗೊಂಡಿತ್ತು. ವಾಹನದಲ್ಲಿದ್ದ ಶುಶ್ರೂಶಕಿಯರಾದ ಕುಮುದಾ ಹಾಗೂ ಸೌಮ್ಯಾ ಎಸ್ ತಕ್ಷಣ ಕಾರ್ಯಪ್ರವೃತ್ತರಾಗಿ ಆಂಬುಲೆನ್ಸ್ ವಾಹನದಲ್ಲೇ ಆಕೆಗೆ ಹೆರಿಗೆ ಮಾಡಿಸಿದರು. ಆಂಬುಲೆನ್ಸ್ ಚಾಲಕ ದಿನೇಶ್ ಗೌಡ ಅವರು ಬಾಣಂತಿ ಹಾಗೂ ಮಗುವನ್ನು ಮಂಗಳೂರಿನ ಸರ್ಕಾರಿ ಲೇಡಿಗೋಷನ್ ಆಸ್ಪತ್ರೆಗೆ ಕಡಿಮೆ ಸಮಯದಲ್ಲಿ ತಲುಪಿಸಿದರು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.