ಬುಧವಾರ, ಜುಲೈ 6, 2022
21 °C
ದ.ಕ ಜಿಲ್ಲೆಯ 10 ಕಡೆಗಳಲ್ಲಿ ಮತದಾನ ವ್ಯವಸ್ಥೆ: ಶೇ 44.80ರಷ್ಟು ಮತದಾನ

ಕನ್ನಡ ಸಾಹಿತ್ಯ ಪರಿಷತ್‌: ದಕ್ಷಿಣ ಕನ್ನಡ ಜಿಲ್ಲೆಗೆ ಡಾ. ಎಂ.ಪಿ ಶ್ರೀನಾಥ್‌ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಕನ್ನಡ ಸಾಹಿತ್ಯ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಡಾ. ಎಂ.ಪಿ ಶ್ರೀನಾಥ್‌ ಆಯ್ಕೆಯಾಗಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕ ಹಾಗೂ ಕೇಂದ್ರ ಘಟಕದ ಅಧ್ಯಕ್ಷರ ಆಯ್ಕೆಗೆ ಭಾನುವಾರ ಜಿಲ್ಲೆಯಾದ್ಯಂತ ಮತದಾನ ನಡೆದಿತ್ತು. ಸಂಜೆ ಮತಗಳ ಎಣಿಕೆ ಕಾರ್ಯ ಮುಕ್ತಾಯವಾಗಿದೆ.

ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಉಜಿರೆಯ ಎಸ್‌ಡಿಎಂ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ. ಎಂ.ಪಿ. ಶ್ರೀನಾಥ್ ಮತ್ತು ಮಂಗಳೂರು ವಿಮಾನ ನಿಲ್ದಾಣದ ನಿವೃತ್ತ ನಿರ್ದೇಶಕ ಎಂ.ಆರ್. ವಾಸುದೇವ ಕಣದಲ್ಲಿದ್ದರು. ಸಂಜೆ ಫಲಿತಾಂಶ ಪ್ರಕಟವಾಗಿದ್ದು, ಡಾ.ಎಂ.ಪಿ. ಶ್ರೀನಾಥ್‌ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿಯಾಗಿದ್ದ ಮಂಗಳೂರು ತಹಶೀಲ್ದಾರ್‌ ಗುರುಪ್ರಸಾದ್‌ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 10 ಮತದಾನ ಕೇಂದ್ರಗಳನ್ನು ವ್ಯವಸ್ಥೆ ಮಾಡಲಾಗಿತ್ತು. ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆದಿದ್ದು, ಒಟ್ಟು 4,538 ಮತದಾರರ ಪೈಕಿ, 2,033 ಜನರ ಮತ ಚಲಾಯಿಸಿದ್ದಾರೆ. ಶೇ 44.80 ರಷ್ಟು ಮತದಾನವಾಗಿದೆ. 1,547 ಪುರುಷ ಹಾಗೂ 486 ಮಹಿಳಾ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಮೂಲ್ಕಿ ತಾಲ್ಲೂಕಿನಲ್ಲಿ ಕನಿಷ್ಠ ಶೇ 30.07 ಹಾಗೂ ಸುಳ್ಯ ತಾಲ್ಲೂಕಿನಲ್ಲಿ ಗರಿಷ್ಠ ಶೇ 62.47 ಮತದಾನ ನಡೆದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು