ಬುಧವಾರ, ಮಾರ್ಚ್ 29, 2023
32 °C
ಸಂತ ಅಲೋಶಿಯಸ್ ಕಾಲೇಜು ಯೋಗ ತರಬೇತಿ

ವಿದ್ಯಾರ್ಥಿಗಳಿಗೆ ಯೋಗ, ಧ್ಯಾನ ಅತ್ಯಗತ್ಯ: ಗೋಪಾಲಕೃಷ್ಣ ದೇಲಂಪಾಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಹೊಸ ಶಿಕ್ಷಣ ನೀತಿ (ಎನ್‍ಇಪಿ) ಪ್ರಕಾರ ಮೊದಲ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಯೋಗ ಶಿಕ್ಷಣ ಕಡ್ಡಾಯವಾಗಿದ್ದು, ಶಿಕ್ಷಕರ ತರಬೇತಿಗಾಗಿ ಎರಡು ದಿನಗಳ ಯೋಗ ಶಿಕ್ಷಣ ಕಾರ್ಯಾಗಾರ ನಗರದ ಸಂತ ಅಲೋಶಿಯಸ್ ಸ್ವಾಯತ್ತ ಕಾಲೇಜಿನಲ್ಲಿ ಈಚೆಗೆ ನಡೆಯಿತು.

ದೇಲಂಪಾಡಿ ಯೋಗ ಪ್ರತಿಷ್ಠಾನದ ಸಹಯೋಗದಲ್ಲಿ ಕಾಲೇಜಿನ ಹಳೆವಿದ್ಯಾರ್ಥಿ, ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರ ಮಾರ್ಗದರ್ಶನದಲ್ಲಿ ಕಾರ್ಯಾಗಾರ ನಡೆಯಿತು.

ಗೋಪಾಲಕೃಷ್ಣ ದೇಲಂಪಾಡಿ ಕಾರ್ಯಾಗಾರ ವನ್ನು ಉದ್ಘಾಟಿಸಿ ಮಾತನಾಡಿ, ‘ಯೋಗ ಶಿಕ್ಷಣ ವಿದ್ಯಾರ್ಥಿಗಳಿಗೆ ಅತೀ ಅಗತ್ಯ, ಸಕಾರಾತ್ಮಕ ಬೆಳವಣಿಗೆ ಯೋಗದಿಂದ ಸಾಧ್ಯ’ ಎಂದರು. ನೀತಾ ಶೆಟ್ಟಿ ಹಾಗೂ ಭವಾನಿ ರಾವ್ ಯೋಗ ಪ್ರಾತ್ಯಕ್ಷಿಕೆಯಲ್ಲಿ ಸಹಕರಿಸಿದರು.

ಪ್ರಾಂಶುಪಾಲ ಡಾ. ಪ್ರವೀಣ್ ಮಾರ್ಟಿಸ್‌ ಮಾತನಾಡಿ, ವಿದ್ಯಾರ್ಥಿಗಳ ಬೌದ್ಧಿಕ ವಿಕಸನಕ್ಕೆ ಯೋಗ ಮತ್ತು ಧ್ಯಾನ ಸಹಕಾರಿ’ ಎಂದರು. ವಿದ್ಯಾರ್ಥಿ ಕ್ಷೇಮಪಾಲನಾ ಡೀನ್  ಡಾ. ಈಶ್ವರ ಭಟ್ ಎಸ್., ನಿರ್ದೇಶಕರಾದ ಡಾ. ಡೆನ್ನಿಸ್ ಫರ್ನಾಂಡಿಸ್, ಪರೀಕ್ಷಾಂಗ ಕುಲಸಚಿವ ಡಾ. ಆಲ್ವಿನ್ ಡೇಸಾ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು