ಮಂಗಳವಾರ, ಮಾರ್ಚ್ 28, 2023
31 °C

ಮಂಗಳೂರು | 8 ಮಂದಿ ಸಾಧಕರಿಗೆ ‘ಸಂದೇಶ' ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನ ವತಿಯಿಂದ ಪ್ರತಿ ವರ್ಷ ನೀಡುವ ಸಂದೇಶ ಪ್ರಶಸ್ತಿಗೆ ಸಾಹಿತಿ ರಾಘವೇಂದ್ರ ಪಾಟೀಲ, ಜಾನಪದ ತಜ್ಞ ಡಾ.ಕೆ.ಚಿನ್ನಪ್ಪ ಗೌಡ, ಪತ್ರಕರ್ತ ಶಿವಾಜಿ ಗಣೇಶನ್‌ ಸೇರಿದಂತೆ ಎಂಟು ಮಂದಿ ಆಯ್ಕೆ ಆಗಿದ್ದಾರೆ.

ಈ ಕುರಿತು ಇಲ್ಲಿ ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾಹಿತಿ ನೀಡಿದ ಪ್ರತಿಷ್ಠಾನದ ಟ್ರಸ್ಟಿ ರಾಯ್ ಕ್ಯಾಸ್ಟಲಿನೊ, ‘ಸಂದೇಶ ಕನ್ನಡ ಸಾಹಿತ್ಯ ಪ್ರಶಸ್ತಿಗೆ ರಾಘವೇಂದ್ರ ಪಾಟೀಲ, ಕೊಂಕಣಿ ಸಾಹಿತ್ಯ ಪ್ರಶಸ್ತಿಗೆ ಆಂಡ್ರ್ಯೂ ಎಲ್. ಡಿಕುನ್ಹ, ತುಳು ಸಾಹಿತ್ಯ ಪ್ರಶಸ್ತಿಗೆ ಡಾ.ಕೆ.ಚಿನ್ನಪ್ಪ ಗೌಡ,  ಮಾಧ್ಯಮ ಪ್ರಶಸ್ತಿಗೆ ಶಿವಾಜಿ ಗಣೇಶನ್, ಕೊಂಕಣಿ ಸಂಗೀತ ಪ್ರಶಸ್ತಿಗೆ ಜಾಯ್ಸ್‌ ಒಝಾರಿಯೊ, ಕಲಾ ಪ್ರಶಸ್ತಿಗೆ ಡಾ.ಎಂ.ಎಸ್. ಮೂರ್ತಿ, ಶಿಕ್ಷಣ ಪ್ರಶಸ್ತಿಗೆ ಕೋಟಿಗಾನಹಳ್ಳಿ ರಾಮಯ್ಯ, ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಸಬೀಹಾ ಭೂಮಿಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರೇರಣಾ ರಿಸೋರ್ಸ್ ಸೆಂಟರ್‌ಗೆ ವಿಶೇಷ ಪ್ರಶಸ್ತಿ ನೀಡಲಾಗುತ್ತದೆ’ ಎಂದು ತಿಳಿಸಿದರು.

ಪ್ರತಿಷ್ಠಾನದ ನಿರ್ದೇಶಕ ಫಾ.ಸುದೀಪ್ ಪೌಲ್, ‘ಪ್ರದಾನ ಸಮಾರಂಭವು ನಗರದ ನಂತೂರಿನಲ್ಲಿರುವ ಸಂದೇಶ ಪ್ರತಿಷ್ಠಾನದಲ್ಲಿ ಫೆ.7ರಂದು ಸಂಜೆ 5.30ಕ್ಕೆ ನಡೆಯಲಿದೆ. ಪ್ರತಿಷ್ಠಾನದ ಅಧ್ಯಕ್ಷರಾಗಿರುವ ಬಳ್ಳಾರಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ  ಫಾ.ಹೆನ್ರಿ ಡಿಸೋಜ ಅಧ್ಯಕ್ಷತೆ ವಹಿಸಲಿದ್ದಾರೆ. ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ.ಪೀಟರ್ ಪಾವ್ಲ್ ಸಲ್ಡಾನ, ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಫಾ.ಜೆರಾಲ್ಡ್ ಐಸಾಕ್ ಲೋಬೊ ಹಾಗೂ ಇತರರು ಭಾಗವಹಿಸಲಿದ್ದಾರೆ’ ಎಂದರು.

ಸುದ್ದಿಗೋಷ್ಠಿಯಲ್ಲಿ ಪ್ರಶಸ್ತಿಯ ಆಯ್ಕೆ ಸಮಿತಿ ಅಧ್ಯಕ್ಷ ಡಾ.ವಲೇರಿಯನ್ ರಾಡ್ರಿಗಸ್, ರಫೀಕ್ ಮಾಸ್ಟರ್ ಹಾಗೂ ಸೈಮನ್ ಕುವೆಲ್ಲೊ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು